ಗುವಾಹಟಿ: ಅಸ್ಸಾಂ ಪೊಲೀಸ್ ಸಿಬ್ಬಂದಿ ಕರ್ಬಿ ಆಂಗ್ಲಾಂಗ್ ಜಿಲ್ಲೆಯ ಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿ ಮೂವರನ್ನು ಬಂಧಿಸಿ 7 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ತಡರಾತ್ರಿ ಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿರುವ ಖತ್ಖಾತಿ ಪ್ರದೇಶದಲ್ಲಿ ಪೊಲೀಸ್ ತಂಡವು ಎರಡು ಟ್ರಕ್ ಗಳನ್ನು ತಡೆದು 30,000 ಹೆಚ್ಚು ವ್ಯಸನಕಾರಿ ಮೆಥಾಂಫೆಟಮೈನ್ ಮಾತ್ರೆಗಳನ್ನು (ಯಾಬಾ ಮಾತ್ರೆಗಳು ಎಂದೂ ಕರೆಯಲಾಗುತ್ತದೆ) ಮತ್ತು 757.15 ಗ್ರಾಂ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೂವರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲಾಗಿದ್ದು, ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್, 1985 (ಎನ್ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ನಾಗಾಲ್ಯಾಂಡ್ ನೆರೆಯ ದೇಶದೊಂದಿಗೆ 215 ಕಿ.ಮೀ ಉದ್ದದ ಬೇಲಿರಹಿತ ಗಡಿಯನ್ನು ಹಂಚಿಕೊಂಡಿರುವುದರಿಂದ ಈ ಮಾದಕವಸ್ತುಗಳನ್ನು ಮ್ಯಾನ್ಮಾರ್ನಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.