ಗುವಾಹಟಿ: ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಇಬ್ಬರು ಪೈಲಟ್ ಗಳು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುವಾಹಟಿಯ ಸೇನಾ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ಮಾತನಾಡಿ, “ಇಂದು ಬೆಳಗ್ಗೆ 9.15 ಕ್ಕೆ ಮಿಲಿಟರಿ ವಾಯುಯಾನ ಚೀತಾ ಹೆಲಿಕಾಪ್ಟರ್ ಏರ್ ಟ್ರಾಫಿಕ್ ಕಂಟ್ರೋಲ್ನೊಂದಿಗೆ ಸಂಪರ್ಕ ಕಳೆದುಕೊಂಡಿತ್ತು ಎಂದರು.
ಅರುಣಾಚಲ ಪ್ರದೇಶದ ಬೊಮ್ಡಿಲಾ ಪಶ್ಚಿಮದಲ್ಲಿರುವ ಮನದಾಳ ಬಳಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ವಿಮಾನದಲ್ಲಿದ್ದ ಪೈಲಟ್ ಮತ್ತು ಸಹ ಪೈಲಟ್ ನಾಪತ್ತೆಯಾಗಿದ್ದಾರೆ. ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.