News Karnataka Kannada
Tuesday, April 30 2024
ಅಸ್ಸಾಂ

ಮೇಘಾಲಯ ಬಿಜೆಪಿ ನಾಯಕನ ರೆಸಾರ್ಟ್ ಮೇಲೆ ಪೊಲೀಸ್‌ ದಾಳಿ: 73 ಮಂದಿಯ ಬಂಧನ

ವಿಮಾನ ನಿಲ್ದಾಣದ ಬಳಿ ಇರುವ ಏರೋಸಿಟಿಯ ಐಷಾರಾಮಿ ಹೋಟೆಲ್‌ನಲ್ಲಿ 15 ದಿನಗಳ ಕಾಲ ಯಾವುದೇ ಹಣವನ್ನು ಪಾವತಿಸದೆ ತಂಗಿದ್ದ ಆರೋಪದ ಮೇಲೆ 37 ವರ್ಷದ ಆಂಧ್ರದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Photo Credit : Pexels

ಗುವಾಹಟಿ: ಮೇಘಾಲಯ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬರ್ನಾರ್ಡ್ ಎನ್.ಮರಾಕ್ ಅವರ ರೆಸಾರ್ಟ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 73 ಜನರನ್ನು ಬಂಧಿಸಲಾಗಿದೆ.

ಬಿಜೆಪಿ ನಾಯಕ ಬರ್ನಾರ್ಡ್ ಎನ್.ಮರಾಕ್ ಅವರಿಗಾಗಿ ಪೊಲಿಸರು ಹುಡುಕಾಟ ನಡೆಸಿದ್ದು, ಅವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಂಪು, ನಾನು ತಲೆಮರೆಸಿಕೊಂಡಿಲ್ಲ, ರಾಜಕೀಯ ದ್ವೇಷಕ್ಕಾಗಿ ಮುಖ್ಯಮಂತ್ರಿ ಕಾನ್ ರಾಡ್ ಸಂಗ್ಮಾ ನನ್ನ ವಿರುದ್ಧ ಆರೋಪ ಮಾಡಿ, ಪೊಲೀಸ್ ಇಲಾಖೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ನಾನು ಕೆಲ ಮಕ್ಕಳ ವಿದ್ಯಾಭ್ಯಾಸ ನೋಡಿಕೊಳ್ಳುತ್ತಿದ್ದು, ಪೊಲೀಸರು ಆ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ಬಂಧಿತರು ಯಾವುದೇ ತಪ್ಪು ಮಾಡಿಲ್ಲ. ಹೋಂಸ್ಟೇಗೆ ವೇಶ್ಯಾಗೃಹ ಪಟ್ಟ ನೀಡಲು ಸಾಧ್ಯವಿಲ್ಲ. ಪಾರ್ಟಿ ಮಾಡುತ್ತಿದ್ದ ಪ್ರೌಢ ವಯಸ್ಕ ಮಹಿಳೆಯನ್ನು ವೇಶ್ಯೆ ಎಂದು ಹೇಳಲು ಆಗಲ್ಲ ಇದು ಮುಖ್ಯಮಂತ್ರಿಗಳು ಅನಗತ್ಯವಾಗಿ ವಿಷಯ ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಿಂಪು ಅವರಿಗೆ ಸೇರಿದ ರೆಸಾರ್ಟ್ ಮೇಲೆ ಪೊಲೀಸರು ದಾಳಿ ನಡೆಸಿದ್ದ ವೇಳೆ ಸ್ವಚ್ಛತೆ ಇಲ್ಲದ ಕೊಠಡಿಯೊಂದರಲ್ಲಿ 6 ಮಕ್ಕಳು ಕೂಡ ಪತ್ತೆಯಾಗಿದ್ದರು. ಎಲ್ಲಾ ಮಕ್ಕಳು ಆಘಾತದಲ್ಲಿದ್ದು, ಮಾತನಾಡುವ ಸ್ಥಿತಿಯಲ್ಲಿಯೂ ಅವರು ಇಲ್ಲ. ಘಟನಾ ಸ್ಥಳದಲ್ಲಿ ಸಿಕ್ಕ ವಸ್ತುಗಳು, ಮಾಹಿತಿ ಪ್ರಕಾರ ಬರ್ನಾರ್ಡ್ ರಿಂಪು ಈ ಸ್ಥಳವನ್ನು ವೇಶ್ಯಾವಾಟಿಕೆಗಾಗಿ ಬಳಸಿಕೊಳ್ಳುತ್ತಿದ್ದರು ಎನ್ನಲಾಗಿದೆ. ಈವರೆಗೆ ಒಟ್ಟು 73 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು