Categories: ಅಸ್ಸಾಂ

ಗೋವುಗಳನ್ನು ಬಲಿ ನೀಡದಂತೆ ಮುಸ್ಲಿಂ ಸಮುದಾಯವನ್ನು ಒತ್ತಾಯಿಸಿದ ಸಂಸದ ಬದ್ರುದ್ದೀನ್ ಅಜ್ಮಲ್

ಅಸ್ಸಾಂ: ಮುಂಬರುವ ಜುಲೈ 10 ರಂದು ನಡೆಯಲಿರುವ ಈದ್ ಸಂದರ್ಭದಲ್ಲಿ ಗೋವುಗಳನ್ನು ಬಲಿ ನೀಡದಂತೆ ಮುಸ್ಲಿಂ ಸಮುದಾಯವನ್ನು ಅಸ್ಸಾಂ ಲೋಕಸಭೆ ಸಂಸದ ಮತ್ತು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಒತ್ತಾಯಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಜ್ಮಲ್, “ನಮ್ಮ ಹಿಂದೂ ಸಹೋದರರ ಭಾವನೆಗಳನ್ನು ಗೌರವಿಸುವಂತೆ ನಾನು ಮನವಿ ಮಾಡಿದ್ದೇನೆ. ಅನೇಕ ಮುಸ್ಲಿಂ ಧಾರ್ಮಿಕ ಸಂಸ್ಥೆಗಳು ಸಹ ಗೋಹತ್ಯೆಯನ್ನು ಬೆಂಬಲಿಸುವುದಿಲ್ಲ. ನಮ್ಮ ಪೂರ್ವಜರು ಹಿಂದೂಗಳಾಗಿದ್ದರು. ಹಿಂದೂಗಳ ಮತ್ತೊಂದು ಗುಂಪಿನ ದೌರ್ಜನ್ಯದಿಂದಾಗಿ, ನಮ್ಮ ಪೂರ್ವಜರು ಇಸ್ಲಾಂಗೆ ಮತಾಂತರಗೊಂಡಿದ್ದಾರೆ. ನಮ್ಮ ಪೂರ್ವಜರ ನಂಬಿಕೆಗಳನ್ನು ಗೌರವಿಸೋಣ ಎಂದು ಹೇಳಿದ್ದಾರೆ.

“ಭಾರತವು ವಿವಿಧ ಸಮುದಾಯಗಳು, ಜನಾಂಗೀಯ ಗುಂಪುಗಳು ಮತ್ತು ಧರ್ಮಗಳ ವ್ಯಕ್ತಿಗಳಿಗೆ ನೆಲೆಯಾಗಿದೆ. ಹಸುವನ್ನು ಪವಿತ್ರ ಸಂಕೇತವಾಗಿ ಪೂಜಿಸುವ ಸನಾತನ ನಂಬಿಕೆಯನ್ನು ಬಹುಪಾಲು ಭಾರತೀಯರು ಆಚರಿಸುತ್ತಾರೆ. ಹಿಂದೂಗಳು ಹಸುವನ್ನು ತಾಯಿ ಎಂದು ನಂಬುತ್ತಾರೆ. ಅಲ್ಲದೆ, ಯಾವುದೇ ಪ್ರಾಣಿಗಳನ್ನು ನೋಯಿಸಬೇಡಿ ಎಂದು ಇಸ್ಲಾಂ ಹೇಳುತ್ತದೆ. ಅದಕ್ಕಾಗಿಯೇ ನಾನು ಈದ್ ಸಮಯದಲ್ಲಿ ಹಸುಗಳನ್ನು ಕೊಲ್ಲದಂತೆ ಮುಸ್ಲಿಮರಿಗೆ ಮನವಿ ಮಾಡುತ್ತೇನೆ.

ಧಾರ್ಮಿಕ ಜವಾಬ್ದಾರಿಯನ್ನು ಪೂರೈಸಲು ಮತ್ತು ಇತರರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸಲು ಮುಸ್ಲಿಂ ಸಮುದಾಯವು ಇತರ ಪ್ರಾಣಿಗಳನ್ನು ಬಳಸಿ ‘ಕುರ್ಬಾನಿ’ (ಬಲಿ) ನೀಡುವಂತೆ ವಿನಂತಿಸಿದ್ದಾರೆ.

ದೇಶದ ಅತಿದೊಡ್ಡ ಇಸ್ಲಾಮಿಕ್ ಶೈಕ್ಷಣಿಕ ಸಂಸ್ಥೆಯಾದ ದಾರುಲ್ ಉಲೂಮ್ ದೇವ್ಬಂದ್ ಸಹ ಎರಡು ವರ್ಷಗಳ ಹಿಂದೆ ಈದ್‌ನಲ್ಲಿ ಹಸುಗಳನ್ನು ಬಲಿ ನೀಡುವುದನ್ನು ತಪ್ಪಿಸುವಂತೆ ಮನವಿ ಮಾಡಿತ್ತು ಎಂದು ಅಜ್ಮಲ್ ಹೇಳಿದರು.

ಇದೇ ಸಂದರ್ಭದಲ್ಲಿ ಆರೆಸ್ಸೆಸ್ ಮತ್ತು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅಜ್ಮಲ್, “ಹಿಂದೂ ರಾಷ್ಟ್ರ ಅಜೆಂಡಾವು  ಕೇವಲ ರಾಜಕೀಯ ಗಿಮಿಕ್ ಆಗಿದೆ, ಅವರು ಹಿಂದೂಗಳ ಮತಗಳನ್ನು ಗಳಿಸಲು ಇದನ್ನು ರಾಜಕೀಯ ಸಾಧನವಾಗಿ ಬಳಸುತ್ತಾರೆ. ಕನಸಿನಲ್ಲಿಯೂ ಹಿಂದೂರಾಷ್ಟ್ರ ನಿರ್ಮಾಣ ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ. ಬದ್ರುದ್ದೀನ್ ಅಜ್ಮಲ್ ರ ಈ ಮನವಿಯು ಅಸ್ಸಾಂನಲ್ಲಿ ಕೋಲಾಹಲವನ್ನು ಸೃಷ್ಟಿಸಿದೆ. ಅವರ ಹೇಳಿಕೆಯನ್ನು ವಿರೋಧಿಸಿ ರಾಜ್ಯದ ಅನೇಕ ಮುಸ್ಲಿಂ ನಾಯಕರು ಆಕ್ರೋಶಭರಿತರಾಗಿ ಪ್ರತಿಕ್ರಿಯಿಸಿದ್ದಾರೆ.

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

3 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

3 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

4 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

4 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

4 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

4 hours ago