ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿ ಡಂಪರ್ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
ಬಾರ್ಪೆಟಾ-ಹೌಲಿ ರಸ್ತೆಯ ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದಾಗ ಇಬ್ಬರು ವ್ಯಕ್ತಿಗಳು ಬೆಳಿಗ್ಗೆ ವಾಕಿಂಗ್ ಮಾಡುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ.
ಮೃತರನ್ನು ಬಾರ್ಪೆಟಾ ಪಟ್ಟಣದ ಡಬ್ಲಿಯಾ ಪ್ಯಾರಾ ನಿವಾಸಿ ಅಬು ಜಾಫರ್ ಮಂಡಲ್ ಎಂದು ಗುರುತಿಸಲಾಗಿದ್ದು, ಆಸಿಕ್ ಹುಸೇನ್ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸರ ಪ್ರಕಾರ, ಅಪಘಾತದಲ್ಲಿ ಭಾಗಿಯಾಗಿದ್ದ ಡಂಪರ್ ಟ್ರಕ್ ಚಾಲಕ ಟ್ರಕ್ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ತಲೆಮರೆಸಿಕೊಂಡಿರುವ ಚಾಲಕನಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.