News Karnataka Kannada
Friday, May 03 2024
ಅಸ್ಸಾಂ

ಅಸ್ಸಾಂ: ₹11,600 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಅಸ್ಸಾಂಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ಇಂದು ₹11,600 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಗುವಾಹಟಿಯ ಖಾನಾಪಾರದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಮತ್ತು ಕೇಂದ್ರದ ಅನುದಾನಿತ ಯೋಜನೆ ಸೇರಿ ಹಲವು ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
Photo Credit : Twitter

ಗುವಾಹಟಿ: ಅಸ್ಸಾಂಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ಇಂದು ₹11,600 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಗುವಾಹಟಿಯ ಖಾನಾಪಾರದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಮತ್ತು ಕೇಂದ್ರದ ಅನುದಾನಿತ ಯೋಜನೆ ಸೇರಿ ಹಲವು ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಕಾಮಾಖ್ಯ ದೇವಸ್ಥಾನದ ಕಾರಿಡಾರ್, ಗುವಾಹಟಿಯ ಹೊಸ ವಿಮಾನ ನಿಲ್ದಾಣದಿಂದ ಆರು ಪಥದ ರಸ್ತೆ, ನೆಹರು ಸ್ಟೇಡಿಯಂ ಅನ್ನು ಫಿಫಾ ಗುಣಮಟ್ಟಕ್ಕೆ ಏರಿಸುವ ಯೋಜನೆ ಮತ್ತು ಚಂದ್ರಾಪುರದಲ್ಲಿ ಹೊಸ ಕ್ರೀಡಾ ಸಂಕೀರ್ಣ ನಿರ್ಮಾಣ ಯೋಜನೆ ಸೇರಿ ಇನ್ನೂ ಹಲವು ಯೋಜನೆಗಳಿಗೆ ಚಾಲನೆ ನೀಡಿದರು.

ಶನಿವಾರ ಸಂಜೆ ಅಸ್ಸಾಂಗೆ ಆಗಮಿಸಿದ ಮೋದಿ, ರಾತ್ರಿ ನಗರದ ಕೊಯಿನಾಧಾರ ರಾಜ್ಯ ಅತಿಥಿ ಗೃಹದಲ್ಲಿ ತಂಗಿದ್ದರು.ರಾತ್ರಿ ಬಿಜೆಪಿಯ ರಾಜ್ಯ ಕೋರ್ ಕಮಿಟಿಯ ಪದಾಧಿಕಾರಿಗಳನ್ನು ಭೇಟಿ ಮಾಡಿ ಪಕ್ಷದ ವ್ಯವಹಾರಗಳ ಕುರಿತು ಚರ್ಚಿಸಿದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು