Categories: ಅಸ್ಸಾಂ

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ನಾವು ದೇಶದ ಮಾತೃಶಕ್ತಿ ಜೊತೆ ನಿಲ್ಲುತ್ತೇವೆ ಎಂದ ಅಮಿತ್ ಶಾ

ಡಿಸ್ಪುರ್: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದು, ನಾವು ದೇಶದ ‘ಮಾತೃಶಕ್ತಿ’ ಜೊತೆ ನಿಲ್ಲುತ್ತೇವೆ ಎಂದರು.

ಅವರು ಗುವಾಹಟಿಯಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿ, ಇದೊಂದು ಬಹಳ ಆಘಾತಕಾರಿ ಸುದ್ದಿ, ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ. ನಾವು ದೇಶದ ಮಹಿಳೆಯರ ಪರ ನಿಲ್ಲುತ್ತೇವೆ. ಈ ವಿಚಾರದಲ್ಲಿ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ.

ನಾನು ಕಾಂಗ್ರೆಸ್ ಸರ್ಕಾರವನ್ನು ಕೇಳಲು ಬಯಸುತ್ತೇನೆ. ಕರ್ನಾಟಕದಲ್ಲಿ ಯಾರ ಸರ್ಕಾರವಿದೆ? ಅವರ್ಯಾಕೆ ಇದುವರೆಗೆ ಕ್ರಮ ಕೈಗೊಂಡಿಲ್ಲ?. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಾಗಿದೆ ಎಂದು ಪ್ರತಿಕ್ರಿಯಿಸಿದರು.

ನಾವು ತನಿಖೆಯ ಪರವಾಗಿದ್ದೇವೆ, ತನಿಖೆ ನಡೆಯಲಿ. ಇದು ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯ, ಹೀಗಾಗಿ ನಾವು ಈ ಬಗ್ಗೆ ಕ್ರಮ ಕೈಗೊಳ್ಳಲು ಆಗಲ್ಲ. ನಮ್ಮ ಮೈತ್ರಿ ಪಕ್ಷ ಜೆಡಿಎಸ್ ಕೂಡ ಇದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಇಂದು ಅವರ ಕೋರ್ ಕಮಿಟಿ ಸಭೆ ಇದ್ದು, ಕ್ರಮಕೈಗೊಳ್ಳಲಿದ್ದಾರೆ ಎಂದು ಅಮಿತ್‌ ಶಾ ಹೇಳಿದರು.

Chaitra Kulal

Recent Posts

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

8 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

32 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

46 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

1 hour ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

1 hour ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

2 hours ago