News Karnataka Kannada
Friday, May 10 2024
ದೇಶ

‘ಅವರ ಮಧ್ಯರಾತ್ರಿಯ ಭಾಷಣ ನಮಗೆ ಸ್ಪೂರ್ತಿ’: ಪ್ರಧಾನಿ ಸ್ಮರಿಸಿದ್ದು ಯಾರನ್ನು ?

Pm narendra modi
Photo Credit : News Kannada

ನವದೆಹಲಿ: ಪ್ರಧಾನಿ ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ನೆನಪಿಸಿಕೊಂಡಿದ್ದಾರೆ. ಹಳೇ ಸಂಸತ್ತಿನ ಭವನದಲ್ಲಿ ತಮ್ಮ ಕೊನೆಯ ಭಾಷಣದಲ್ಲಿ ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಮೊದಲ ಪ್ರಧಾನಿ ಜವಾಹರ್ಲಾಲ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಂಡಿತ್ ನೆಹರು ಅವರು ‘ಸ್ಟ್ರೋಕ್ ಆಫ್ ಮಿಡ್ನೈಟ್ ಅವರ್’ ನಲ್ಲಿ ಮಾತನಾಡಿದ್ದು ಈ ಸಂಸತ್ತಿನಲ್ಲಿ ಎಲ್ಲರಿಗೂ ಸ್ಫೂರ್ತಿ ನೀಡುತ್ತಿದೆ ಎಂದು ಶ್ಲಾಘಿಸಿದ್ದಾರೆ. ಮಾಜಿ ಪ್ರಧಾನಿಗಳಾದ ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಇಂದಿರಾಗಾಂಧಿ ಅವರನ್ನು ಸ್ಮರಿಸಿದ ಮೋದಿ, “ಈ ಸಂಸತ್ತು ಮೂವರು ಪ್ರಧಾನಿಗಳನ್ನು ಕಳೆದುಕೊಂಡಾಗ – ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಇಂದಿರಾ ಗಾಂಧಿಯವರಿಗೆ ಸೂಕ್ತ ಗೌರವವನ್ನು ನೀಡಲಾಯಿತು.

ನೆಹರೂ ಅವರಿಂದ ಶಾಸ್ತ್ರಿಯವರಿಂದ ವಾಜಪೇಯಿಯವರವರೆಗೆ ಹಲವಾರು ನಾಯಕರು ಭಾರತದ ಬಗ್ಗೆ ತಮ್ಮ ದೃಷ್ಟಿಕೋನವನ್ನು ಪ್ರಸ್ತುತಪಡಿಸುವುದನ್ನು ಈ ಸಂಸತ್ತು ನೋಡಿದೆ ಎಂದು ಮೋದಿ ಸ್ಮರಿಸಿಕೊಂಡಿದ್ದಾರೆ. ಸಂಸತ್ನಲ್ಲಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರ ಮಧ್ಯರಾತ್ರಿಯ ಭಾಷಣ ಈಗಲೂ ಪ್ರತಿಧ್ವನಿಸುತ್ತಿದೆ. ಅದು ನಮಗೆ ಸ್ಪೂರ್ತಿ ನೀಡುತ್ತಲೇ ಇರುತ್ತವೆ ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು