ನವದೆಹಲಿ: ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿರುವ ಆಸ್ಟ್ರೇಲಿಯಾದ ಪ್ರಧಾನಿ, ಪಿಎಂ ಮೋದಿ ಅವರು ಆಯೋಜಿಸಿದ್ದ ಜಿ 20 ಶೃಂಗಸಭೆಯನ್ನು ‘Successful” ಎಂದು ಬಣ್ಣಿಸಿದ್ದಾರೆ.
ಎಕ್ಸ್ ಪೋಸ್ಟ್ನಲ್ಲಿ “ಆಸ್ಟ್ರೇಲಿಯಾ ಮತ್ತು ಭಾರತದ ನಡುವಿನ ಸಮಗ್ರ ಆರ್ಥಿಕ ಸಹಕಾರ ಒಪ್ಪಂದವನ್ನು ಮುಕ್ತಾಯಗೊಳಿಸುವ ಬಗ್ಗೆ ಉತ್ತಮ ದ್ವಿಪಕ್ಷೀಯ ಚರ್ಚೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ನವದೆಹಲಿಯಲ್ಲಿ ಆಯೋಜಿಸಿದ ಯಶಸ್ವಿ G20 ಸಭೆ” ಎಂದು ಅಲ್ಬನೀಸ್ ಎಕ್ಸ್ ನಲ್ಲಿ ಬರೆದಿದ್ದಾರೆ. ಪ್ರಧಾನಿ ಮೋದಿಯವರ ಆಸ್ಟ್ರೇಲಿಯಾ ಭೇಟಿಯು ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸಿದೆ ಎಂದು ಆಸ್ಟ್ರೇಲಿಯಾ ಪ್ರಧಾನಿ ಹೇಳಿದ್ದಾರೆ. ಶುಕ್ರವಾರ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ನವದೆಹಲಿಗೆ ಆಗಮಿಸಿದರು.
A successful G20 meeting hosted by @narendramodi in New Delhi today followed by a good bilateral discussion about concluding the Comprehensive Economic Cooperation Agreement between Australia and India 🇦🇺🇮🇳 pic.twitter.com/tglLOScrcJ
— Anthony Albanese (@AlboMP) September 9, 2023