Categories: ದೇಶ

“ನಿಮ್ಮ ಹೆಂಡತಿಯರ ಭಾರತೀಯ ಸೀರೆಗಳನ್ನು ಸುಟ್ಟು ಹಾಕಿ” ಎಂದ ಬಾಂಗ್ಲಾ ಪಿಎಂ

ನವದೆಹಲಿ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಇತ್ತೀಚೆಗೆ ದೇಶದ ವಿರೋಧ ಪಕ್ಷ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ ಸದಸ್ಯರಿಗೆ ‘ನಿಮ್ಮ ಹೆಂಡತಿಯರ ಭಾರತೀಯ ಸೀರೆಗಳನ್ನು ಸುಟ್ಟು ಹಾಕಿ’ ಎಂದಿದ್ದಾರೆ.

ವಿರೋಧ ಪಕ್ಷವು ಭಾರತೀಯ ಉತ್ಪನ್ನಗಳ ವಿರುದ್ಧ ಅಭಿಯಾನವನ್ನು ನಡೆಸುತ್ತಿರುವುದರ ಬಗ್ಗೆ ಸಿಡಿಮಿಡಿಗೊಂಡ ಹಸೀನಾ BNP ನಾಯಕರು ನಿಜವಾಗಿಯೂ ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಿದರೆ, ಅವರು ತಮ್ಮ ಪತ್ನಿಯರ ಭಾರತೀಯ ಸೀರೆಗಳನ್ನು ಸುಡಬೇಕಾಗುತ್ತದೆ ಎಂದರು.

ಹೊಸದಿಲ್ಲಿಯೊಂದಿಗೆ ಉತ್ತಮ ಸಂಬಂಧವನ್ನು ಹೊಂದಿರುವ ಹಸೀನಾ, ತಮ್ಮ ಭಾಷಣದಲ್ಲಿ ವಿರೋಧ ಪಕ್ಷದವರಿಗೆ ಸಾಕಷ್ಟು ಪ್ರಶ್ನೆಗಳನ್ನು ಹಾಕಿ- ‘ನೀವು ಭಾರತೀಯ ಮಸಾಲೆಗಳಿಲ್ಲದ ಆಹಾರ ತಿನ್ನಬಹುದೇ? ಬಹಿಷ್ಕಾರ ಪ್ರಚಾರಕರ ಪತ್ನಿಯರು ಎಷ್ಟು ಭಾರತೀಯ ಸೀರೆಗಳನ್ನು ಹೊಂದಿದ್ದಾರೆ? ಅವರು ತಮ್ಮ ಹೆಂಡತಿಯರಿಂದ ಸೀರೆಗಳನ್ನು ತೆಗೆದುಕೊಂಡು ಅವುಗಳನ್ನು ಏಕೆ ಸುಡುವುದಿಲ್ಲ? ಭಾರತದ ಉತ್ಪನ್ನಗಳನ್ನು ವಿರೋಧಿಸುವವರು ನಿಜವಾಗಿಯೂ ಅವರ ಜೀವನದಲ್ಲಿ ಬಹಿಷ್ಕರಿಸಿದ್ದಾರೆಯೇ ಎಂದು ತಿಳಿಯಲು ನಾನು ಬಯಸುತ್ತೇನೆ’ ಎಂದಿದ್ದಾರೆ.

 

Ashitha S

Recent Posts

ಗುಂಡ್ಲುಪೇಟೆ ಪೊಲೀಸರಿಂದ ಕಾರ್ಯಾಚರಣೆ : ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ‌ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು…

9 mins ago

13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ : ಪೊಲೀಸ್‌ ಅಲರ್ಟ್‌

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಭಾನುವಾರ ಇ-ಮೇಲ್‌ ಮೂಲಕ ಬೆದರಿಕಯೊಂದು ಬಂದಿದ್ದು ಅದರಂತೆ ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ…

16 mins ago

ಮೂರು ಕೊಲೆ ಕೇಸ್‌ : ಬೆಳ್ಳಂ ಬೆಳಗೆ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ ಕಾಲಿಗೆ…

42 mins ago

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

1 hour ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

1 hour ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

2 hours ago