News Karnataka Kannada
Friday, May 17 2024
ದೇಶ

ಇಂದಿನಿಂದ ಕೆಜಿಗೆ 29 ರೂ. ದರದಲ್ಲಿ ‘ಭಾರತ್ ಅಕ್ಕಿ’

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಸಿಹಿ ಸುದ್ದಿ ಇಲ್ಲಿದೆ. ಅಕ್ಕಿ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಭಾರತ್ ಅಕ್ಕಿ ಯೋಜನೆ ಮಂಗಳವಾರದಿಂದ ಆರಂಭವಾಗಲಿದೆ. ಪ್ರತಿ ಕೆಜಿಗೆ 29 ರೂಪಾಯಿ ದರ ನಿಗದಿ ಪಡಿಸಲಾಗಿದೆ.
Photo Credit : News Kannada

ವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಸಿಹಿ ಸುದ್ದಿ ಇಲ್ಲಿದೆ. ಅಕ್ಕಿ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಭಾರತ್ ಅಕ್ಕಿ ಯೋಜನೆ ಇಂದಿನಿಂದ(ಫೆ.06) ಆರಂಭವಾಗಲಿದೆ. ಪ್ರತಿ ಕೆಜಿಗೆ 29 ರೂಪಾಯಿ ದರ ನಿಗದಿ ಪಡಿಸಲಾಗಿದೆ.

ತಲಾ 5 ಕೆಜಿ, 10 ಕೆಜಿ ಬ್ಯಾಗ್ ಗಳಲ್ಲಿ ಅಕ್ಕಿ ಮಾರಾಟ ಮಾಡಲಿದ್ದು, ಪ್ರತಿ ಕೆಜಿಗೆ 29 ರೂ. ದರ ನಿಗದಿಪಡಿಸಲಾಗಿದೆ. ನಾಫೆಡ್, ಎನ್.ಸಿ.ಸಿ.ಎಫ್., ಕೇಂದ್ರೀಯ ಭಂಡಾರಗಳು, ಇ- ಕಾಮರ್ಸ್ ತಾಣಗಳ ಮೂಲಕ ಅಕ್ಕಿ ಮಾರಾಟ ಮಾಡಲಾಗುತ್ತದೆ. ಮೊದಲ ಹಂತದಲ್ಲಿ 5 ಲಕ್ಷ ಟನ್ ಅಕ್ಕಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಈಗಾಗಲೇ ಕೇಂದ್ರ ಸರ್ಕಾರ ಭಾರತ್ ಅಟ್ಟಾವನ್ನು ಪ್ರತಿ ಕೆಜಿಗೆ 27.50 ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಕೆಜಿಗೆ 60 ರೂಪಾಯಿ ದರದಲ್ಲಿ ಭಾರತ್ ದಾಲ್ ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲಾಗುತ್ತಿದೆ.

ಬೆಲೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರೀಯ ಮಳಿಗೆಗಳ ಮೂಲಕ ಅಕ್ಕಿಯನ್ನು ಚಿಲ್ಲರೆ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ. ಇದರ ಅಡಿಯಲ್ಲಿ ಪ್ರತಿ ಕೆಜಿಗೆ 29 ರೂ.ನಂತೆ ‘ಭಾರತ್ ರೈಸ್’ ಮಾರಾಟ ಮಾಡಲು ನಿರ್ಧರಿಸಲಾಗಿದೆ. ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ‘ಭಾರತ್ ರೈಸ್’ ಅನ್ನು ಮಾರಾಟ ಮಾಡುತ್ತದೆ. ಮುಂದಿನ ವಾರದಿಂದ 5 ಕೆಜಿ ಹಾಗೂ 10 ಕೆಜಿ ಪ್ಯಾಕೆಟ್ ನಲ್ಲಿ Bharat Rice ದೊರೆಯಲಿದೆ ಎಂದು ಸಂಜೀವ್ ಚೋಪ್ರಾ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಸರ್ಕಾರವು ಐದು ಲಕ್ಷ ಟನ್ ಅಕ್ಕಿಯನ್ನು ಚಿಲ್ಲರೆ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ನಿಗದಿಪಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು