News Karnataka Kannada
Monday, April 29 2024
ರಾಜಸ್ಥಾನ

ರಾಜಸ್ಥಾನದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ: ಸಚಿವ ಸುರೇಂದ್ರ ಪಾಲ್ ಸಿಂಗ್ ಗೆ ಸೋಲು

Bjp
Photo Credit : News Kannada
ಜೈಪುರ: ರಾಜಸ್ಥಾನದ ಕರಣಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೂಪಿಂದರ್ ಸಿಂಗ್ ಕೂನರ್ ಅವರು ಸಚಿವ ಸುರೇಂದ್ರ ಪಾಲ್ ಸಿಂಗ್ ವಿರುದ್ಧ 11,283 ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದು, ಆಡಳಿತರೂಢ ಬಿಜೆಪಿ ತೀವ್ರ ಮುಖಭಂಗವಾಗಿದೆ.

ಮುಖ್ಯ ಚುನಾವಣಾ ಕಚೇರಿಯ ಪ್ರಕಾರ, ಕೂನರ್ 94,950 ಮತಗಳನ್ನು ಗಳಿಸಿದರೆ, ಸಿಂಗ್ 83,667 ಮತಗಳನ್ನು ಪಡೆದಿದ್ದಾರೆ. “ನನಗೆ ಮತ ನೀಡಿದ ಕರಣ್ಪುರದ ಜನರಿಗೆ ನಾನು ಕೃತಜ್ಞನಾಗಿದ್ದೇನೆ … ಕೇಂದ್ರ ಮಂತ್ರಿಗಳು ಸಹ ಪ್ರಚಾರಕ್ಕೆ ಬಂದಿದ್ದರು. ಆದರೆ ಜನ ಅವರನ್ನು ತಿರಸ್ಕರಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗೆಲ್ಲುವಂತೆ ಮಾಡಿದರು” ಎಂದು ಗೆಲುವಿನ ನಂತರ ಕೂನರ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು