News Karnataka Kannada
Friday, April 19 2024
Cricket
ಬಿಹಾರ

ಪ್ರೇಮ ವೈಫಲ್ಯದ ಕಾರಣಕ್ಕೆ ವಿಷ ಸೇವಿಸಿದ ಆರು ಸ್ನೇಹಿತೆಯರು: ಮೂವರ ಸಾವು

Love Failure
Photo Credit :

ಆರು ಮಂದಿ ಸ್ನೇಹಿತೆಯರು ಒಟ್ಟಿಗೆ ವಿಷ ಸೇವಿಸಿರುವ ಆಘಾತಕಾರಿ ಘಟನೆ ಬಿಹಾರದ ಔರಂಗಾಬಾದ್‌ನಲ್ಲಿ ನಡೆದಿದೆ. ಇವರಲ್ಲಿ ಮೂವರು ಸಾವನ್ನಪ್ಪಿದ್ದು, ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರ ಸ್ಥಿತಿ ಕೂಡ ವಿಷಮವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಎಲ್ಲರ ವಯಸ್ಸು ಸುಮಾರಿ 12ರಿಂದ 16ಇರಬಹುದು ಎಂದು ಅಂದಾಜು ಮಾಡಲಾಗಿದೆ. ಪ್ರೀತಿ ಮಾಡಿದವ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಕ್ಕೇ ಇದಕ್ಕೆ ಕಾರಣ ಎನ್ನಲಾಗಿದೆ. ಪೊಲೀಸರ ಪ್ರಕಾರ. ಬಾಲಕಿ ತನ್ನ ಸೋದರ ಮಾವನನ್ನು ಪ್ರೀತಿಸುತ್ತಿದ್ದಳು ಎಂದು ಔರಂಗಾಬಾದ್ ಎಸ್ಪಿ ಕಾಂತೇಶ್ ಕುಮಾರ್ ಮಿಶ್ರಾ ಹೇಳಿದ್ದಾರೆ. ಶುಕ್ರವಾರ ಆಕೆ ಮತ್ತು ಐವರು ಸ್ನೇಹಿತರು ಸೇರಿ ಹುಡುಗನ ಬಳಿ ಹೋಗಿ ಮದುವೆ ವಿಚಾರ ತಿಳಿಸಿದ್ದಾರೆ. ಆದರೆ ಈ ಪ್ರಸ್ತಾವನೆಯನ್ನು ಆತ ತಿರಸ್ಕರಿಸಿರುವುದಾಗಿ ಬಹಿರಂಗಪಡಿಸಿದ್ದಾರೆ.

ಹುಡುಗನ ನಿರಾಕರಣೆಯಿಂದ ಹುಡುಗಿ ತೀವ್ರ ಖಿನ್ನತೆಗೆ ಒಳಗಾಗಿ ವಿಷಕಾರಿ ಪದಾರ್ಥವನ್ನು ಸೇವಿಸಿದ್ದಾಳೆ ಎನ್ನಲಾಗುತ್ತಿದೆ. ಅದೇ ವೇಳೆ ಉಳಿದವರೂ ಕೂಡ ವಿಷ ತೆಗೆದುಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಅವರನ್ನು ಔರಂಗಾಬಾದ್‌ನ ಸದರ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಅಷ್ಟರಲ್ಲಾಗಲೇ ಮೂವರು ಮೃತಪಟ್ಟಿದ್ದರು. ಉಳಿದ ಮೂವರ ಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಗಯಾದ ಮಗಧ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ. ಆದರೆ ಉಳಿದ ಐವರು ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗಿಲ್ಲ,ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು