Categories: ಬಿಹಾರ

ಉತ್ತರ ಭಾರತದಲ್ಲಿ ರಣಭೀಕರ ಮಳೆ: ಅಪಾರ ಹಾನಿ

ಉತ್ತರ ಭಾರತ: ಬಿರುಬೇಸಿಗೆಯಿಂದ ತತ್ತರಿಸಿದ್ದ ಉತ್ತರ ಭಾರತವೀಗ ರಣಭೀಕರ ಮಳೆಯ ಅಬ್ಬರಕ್ಕೆ ನಲುಗುತ್ತಿದೆ. ನಿರಂತರ ಮಳೆ ಮತ್ತು ಭೂಕುಸಿತ, ಪ್ರವಾಹಗಳಿಂದಾಗಿ ಬಿಹಾರ, ಅಸ್ಸಾಂನಲ್ಲಿ ಅಪಾರ ಹಾನಿ ಎದುರಾಗಿದೆ.

ಬಿಹಾರದಲ್ಲಿ ಸಿಡಿಲು, ಗುಡುಗು ಸಹಿತ ಸುರಿಯುತ್ತಿರುವ ಮಳೆಯಿಂದಾಗಿ 33 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮತ್ತೊಂದೆಡೆ ಅಸ್ಸಾಂನಲ್ಲಿ ಪ್ರವಾಹ ಮತ್ತು ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿದೆ ಮತ್ತು ರಾಜ್ಯದ 29 ಜಿಲ್ಲೆಗಳಲ್ಲಿ ಸುಮಾರು 7.12 ಲಕ್ಷ ಜನರು ಪ್ರವಾಹ ಬಾಧಿತರಾಗಿದ್ದಾರೆ.

“ಬಿಹಾರದ 16 ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲಿಗೆ ಸಿಲುಕಿ 33 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ₹ 4 ಲಕ್ಷ ಪರಿಹಾರ ನೀಡಲು ಸೂಚನೆ ನೀಡಲಾಗಿದೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಟ್ವಿಟ್‌ ಮಾಡಿದ್ದು, ಜನರು ಜಾಗರೂಕರಾಗಿರಲು ಮನವಿ ಮಾಡಿಕೊಂಡಿದ್ದಾರೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ನಾಗಾಂವ್ ಜಿಲ್ಲೆಯಲ್ಲಿ 3.36 ಲಕ್ಷಕ್ಕೂ ಹೆಚ್ಚು ಜನರು ಹಾನಿಗೊಳಗಾಗಿದ್ದಾರೆ. ಕ್ಯಾಚಾರ್ ಜಿಲ್ಲೆಯಲ್ಲಿ 1.66 ಲಕ್ಷ, ಹೋಜೈನಲ್ಲಿ 1.11 ಲಕ್ಷ ಮತ್ತು ದರ್ರಾಂಗ್ ಜಿಲ್ಲೆಯಲ್ಲಿ 52,709 ಜನರು ಪ್ರವಾಹ ಬಾಧಿತರಾಗಿದ್ದಾರೆ.

ಕ್ಯಾಚಾರ್, ಲಖಿಂಪುರ ಮತ್ತು ನಾಗಾಂವ್ ಜಿಲ್ಲೆಗಳಲ್ಲಿ ಪ್ರವಾಹದಲ್ಲಿ ಮುಳುಗಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಭೂಕುಸಿತಗಳು ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಹಾಫ್ಲಾಂಗ್-ನಗರವನ್ನು ಧ್ವಂಸಗೊಳಿಸಿವೆ. ರಸ್ತೆಗಳಲ್ಲಿ ನೀರು ನಿಂತು ಸಂಚಾರ ಸ್ಥಗಿತಗೊಂಡಿದೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನರು ವಾಸಿಸಲು ಸಾಧ್ಯವಾಗುತ್ತಿಲ್ಲ.

ವರದಿಗಳ ಪ್ರಕಾರ, 80,036.90 ಹೆಕ್ಟೇರ್ ಬೆಳೆ ಭೂಮಿ ಮತ್ತು 2,251 ಹಳ್ಳಿಗಳು ಇನ್ನೂ ನೀರಿನಡಿ ಮುಳುಗಿವೆ ಮತ್ತು 74,705 ಪ್ರವಾಹ ಪೀಡಿತ ಜನರನ್ನು ಜಿಲ್ಲಾಡಳಿತದಿಂದ ಸ್ಥಾಪಿಸಲಾದ 234 ಪರಿಹಾರ ಶಿಬಿರಗಳಲ್ಲಿ ಇರಿಸಲಾಗಿದೆ.

Sneha Gowda

Recent Posts

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

3 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

13 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

23 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

35 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

47 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

50 mins ago