News Karnataka Kannada
Saturday, May 04 2024
ಬಿಹಾರ

ನಕಲಿ ಮದ್ಯ ಸೇವಿಸಿ ಐದು ಜನ ಮೃತ

Liquor lovers' association writes to CM, asks him not to hike liquor prices
Photo Credit :

ಬಿಹಾರ : ನಕಲಿ ಮದ್ಯ ಸೇವಿಸಿ ಐದು ಜನ ಮೃತಪಟ್ಟಿದ್ದು, ಹಲವರು ಅಸ್ವಸ್ಥಗೊಂಡಿರುವ ಘಟನೆ ಬಿಹಾರದ ಮುಜಾಫರ್ ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಸ್ಥಳದಲ್ಲಿ ಮದ್ಯವನ್ನೂ ಸಂಪೂರ್ಣ ನಿಷೇಧಿಸಲಾಗಿತ್ತು.

ಸರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ರುಪೌಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾಲ್ವರು ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಇನ್ನೋರ್ವನ ಶವ ಅವರ ಮನೆಯ ಬಳಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪಂಚಾಯಿತಿ ಸಮಿತಿ ಸದಸ್ಯ ಸೇರಿದಂತೆ ಇಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೃತರ ಮನೆಯನ್ನು ಪರಿಶೀಲನೆ ನಡೆಸಿದಾಗ ಖಾಲಿ ಮದ್ಯ ಮತ್ತು ಮೀಥೈಲ್ ಆಲ್ಕೋಹಾಲ್ ಬಾಟಲಿಗಳ ರಾಶಿಗಳು ಸಿಕ್ಕಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ನಡೆಸಲಾಗುತ್ತಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ನಿರ್ದಿಷ್ಟ ವಿಷಕಾರಿ ವಸ್ತುವನ್ನು ಸೇವಿಸಿ ಐದು ಜನರು ಮೃತಪಟ್ಟಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಮುಜಾಫರ್ ಪುರ ಹಿರಿಯ ಪೊಲೀಸ್ ಅಧೀಕ್ಷಕ ಜಯಂತ್ ಕಾಂತ್ ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು