Categories: ಬಿಹಾರ

ನಳಂದಾ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ 87 ಮಂದಿ ವೈದ್ಯರ ಕೊರೊನಾ ವರದಿ ಪಾಸಿಟಿವ್​

ಬಿಹಾರ : ದೇಶದಲ್ಲಿ ಕೊರೊನಾ ಆತಂಕ ಹೆಚ್ಚಾಗಿರುವ ಬೆನ್ನಲ್ಲೇ ಬಿಹಾರದಲ್ಲಿ ಬರೋಬ್ಬರಿ 87 ಮಂದಿ ವೈದ್ಯರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಇದರಿಂದಾಗಿ ಕೊರೊನಾ ಮೂರನೇ ಅಲೆಯ ಭಯ ಇನ್ನಷ್ಟು ಹೆಚ್ಚಾಗಿದೆ. ಪಾಟ್ನಾದ ನಳಂದಾ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ 87 ಮಂದಿ ವೈದ್ಯರು ಕೊರೊನಾ ವರದಿ ಪಾಸಿಟಿವ್​ ಬಂದಿದೆ ಎಂದು ಪಾಟ್ನಾ ಡಿಎಂ ಚಂದ್ರಶೇಖರ್​ ಸಿಂಗ್​​ ಅಧಿಕೃತ ಮಾಹಿತಿ ನೀಡಿದ್ದಾರೆ.

ಸೋಂಕಿಗೆ ಒಳಗಾದ ವೈದ್ಯರಲ್ಲಿ ಯಾರ ಸ್ಥಿತಿಯೂ ಗಂಭೀರವಾಗಿಲ್ಲ. ಕೆಲವರು ಲಕ್ಷಣ ರಹಿತ ಸೋಂಕನ್ನು ಹೊಂದಿದ್ದಾರೆ. ಉಳಿದವರಿಗೆ ಸೌಮ್ಯ ಪ್ರಮಾಣದಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದೆ. ಕೊರೊನಾ ಸೋಂಕಿಗೆ ಒಳಗಾದ ವೈದ್ಯರನ್ನು ಆಸ್ಪತ್ರೆಯಲ್ಲಿ ಕ್ಯಾಂಪಸ್​ನಲ್ಲಿ ಪ್ರತ್ಯೇಕವಾಗಿ ಇರಿಸಿದ್ದೇವೆ ಎಂದು ಡಾ. ಚಂದ್ರಶೇಖರ್​ ಸಿಂಗ್​ ಹೇಳಿದರು.

ಕಳೆದ ವಾರ ಇಂಡಿಯನ್​ ಮೆಡಿಕಲ್​ ಅಸೋಸಿಯೇಷನ್​​ನಿಂದ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೈದ್ಯರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದವು. ಈ ಬಗ್ಗೆ ವೈದ್ಯರು ಮಾಹಿತಿ ನೀಡುತ್ತಿದ್ದಂತೆಯೆ ಅವರಿಗೆ ಆರ್​ಟಿ ಪಿಸಿಆರ್​ ಪರೀಕ್ಷೆಗೆ ಒಳಪಡಿಸಲಾಯಿತು ಎಂದು ಎನ್​​ಎಂಸಿಹೆಚ್​​ ಸೂಪರಿಟೆಂಡೆಂಟ್​​ ವಿನೋದ್​ ಕುಮಾರ್​ ಹೇಳಿದರು.

ಬಿಹಾರದಲ್ಲಿ ಭಾನುವಾರದ ಒಂದೇ ದಿನ 352 ಕೋವಿಡ್​ ಹೊಸ ಪ್ರಕರಣಗಳು ವರದಿಯಾಗಿವೆ. ಈ 352 ಮಂದಿಯಲ್ಲಿ 17 ಮಂದಿ ನಳಂದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ 17 ಮಂದಿ ಕಿರಿಯ ವೈದ್ಯರು ಸೇರಿದ್ದಾರೆ. ಬಿಹಾರದಲ್ಲಿ ಪ್ರಸ್ತುತ 1074 ಸಕ್ರಿಯ ಕೋವಿಡ್​ ಪ್ರಕರಣಗಳಿವೆ.

ಬಿಹಾರದಲ್ಲಿ ಶುಕ್ರವಾರ 281, ಶನಿವಾರ 158 ಹಾಗೂ ಭಾನುವಾರದಂದು 352 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿವೆ. ಆದರೆ ಕಳೆದ ನಾಲ್ಕು ದಿನಗಳಲ್ಲಿ ಬಿಹಾರದಲ್ಲಿ ಕೋವಿಡ್​ ಸಾವಿನ ಪ್ರಮಾಣ ಶೂನ್ಯವಾಗಿದೆ. ಆದ್ದರಿಂದ ಸಾವಿನ ಸಂಖ್ಯೆ ಕಳೆದ ನಾಲ್ಕು ದಿನಗಳಿಂದ 12,096 ಆಗಿದೆ.

Sneha Gowda

Recent Posts

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

22 mins ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

56 mins ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

1 hour ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

2 hours ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

2 hours ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

2 hours ago