ಬಿಹಾರ: ರಾಜ್ಯದಲ್ಲಿ ದೀಪಾವಳಿ ಹಬ್ಬದ ದಿನವೇ ಘೋರ ದುರಂತವೊಂದು ಸಂಭವಿಸಿದೆ. ನಕಲಿ ಮದ್ಯಸೇವಿಸಿದಂತ 24 ಜನರು ಧಾರುಣವಾಗಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಬಿಹಾರದ ತೆಲ್ಹುವಾ ಗ್ರಾಮದ ಜನರು ಚಮರ್ತೋಲಿ ಎಂಬಲ್ಲಿ ತಯಾರಿಸಿದ್ದಂತ ನಕಲಿ ಮದ್ಯವನ್ನು ಸೇವಿಸಿದ್ದಾರೆ ಎನ್ನಲಾಗಿದೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಹೀಗೆ ತೀವ್ರವಾಗಿ ಅಸ್ವಸ್ಥಗೊಂಡಂತ 24 ಮಂದಿ ಚಿಕಿತ್ಸೆ ಫಲಕಾರಿಯಾಗಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವಂತ ಪೊಲೀಸರು, ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.