News Karnataka Kannada
Saturday, May 04 2024
ಬಿಹಾರ

ಬಿಹಾರ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್​ ಕ್ಲೀನರ್ ಅತ್ಯಾಚಾರ ಎಸಗಿದ ಘಟನೆ ಸಂಭವಿಸಿದೆ.
Photo Credit : IANS

ಪಟ್ನಾ : ಅಪ್ರಾಪ್ತೆ ಮೇಲೆ ಮೂರು ದಿನಗಳಿಂದ ನಿರಂತರವಾಗಿ ಐವರು ಯುವಕರು ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಸುಪಾಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಆರೋಪಿಗಳು ಮಾ. 19 ರಂದು ಬಾಲಕಿಯನ್ನು ಅಪಹರಿಸಿ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬಳಿಕ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಕೃತ್ಯವನ್ನು ರೆಕಾರ್ಡ್ ಮಾಡಿ, ಈ ಬಗ್ಗೆ ಯಾರಿಗಾದರೂ ಬಾಯ್ಬಿಟ್ಟರೆ ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡುವುದಾಗಿ ಬಾಲಕಿಗೆ ಬೆದರಿಕೆಯೊಡ್ಡಿದ್ದಾರೆ.

ಬಳಿಕ ಬಾಲಕಿಯನ್ನು ಮಾರ್ಚ್ 22 ರಂದು ಆಕೆಯ ಗ್ರಾಮದ ಸಮೀಪ ಬಿಟ್ಟು ಹೋಗಿದ್ದಾರೆ. ಮನೆಗೆ ಬಂದ ಬಾಲಕಿ ಪೋಷಕರಿಗೆ ಘಟನೆ ಬಗ್ಗೆ ವಿವರಿಸಿದ್ದಾಳೆ.

ಇದಕ್ಕೂ ಮುನ್ನ ಬಾಲಕಿ ಕಾಣೆಯಾಗಿರುವ ಬಗ್ಗೆ ಆಕೆಯ ತಂದೆ ಸಾದರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಾಲಕಿ ಮನೆಗೆ ಹಿಂದಿರುಗಿದ ಬಳಿಕ ಮತ್ತೆ ಠಾಣೆಗೆ ತೆರಳಿ ಸಾಮೂಹಿಕ ಅತ್ಯಾಚಾರ ಮತ್ತು ಅಪಹರಣದ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಕೇಳಿದ್ದಾರೆ. ಆದರೆ ಪೊಲೀಸರು ನಿರಾಕರಿಸಿದ್ದಾರೆ.

ಬಳಿಕ ಜಿಲ್ಲೆಯ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಸಂತ್ರಸ್ತೆ ದೂರು ನೀಡಿದ್ದಾರೆ. ಜಯದೀಪ್ ಠಾಕೂರ್ ಎಂಬಾತ ತನ್ನ ನಾಲ್ವರು ಸ್ನೇಹಿತರೊಂದಿಗೆ ಬಾಲಕಿಯನ್ನು ಅಪಹರಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಮೂರು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ತಿಳಿಸಿದ್ದಾಳೆ.

ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಎಸ್‌ಡಿಪಿಒ ಇಂದ್ರಾ ಪ್ರಕಾಶ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು