ಬೆಟ್ಟಿಯಾ(ಬಿಹಾರ): ಬಿಹಾರದ ಪಶ್ಚಿಮ ಚಂಪಾರಣ್ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ.
ಬಸ್ಸಿನಲ್ಲೇ ಚಾಲಕ, ಹೆಲ್ಪರ್ ಮತ್ತು ಕಂಡಕ್ಟರ್ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬಗ್ಗೆ ಮಾಹಿತಿ ನೀಡಿರುವ ಬಾಲಕಿ, ನನ್ನನ್ನು ಪಾಟ್ನಾಗೆ ಕರೆದುಕೊಂಡು ಹೋಗುವುದಾಗಿ ಹೇಳಿ ಹೆಲ್ಪರ್ ಬಸ್ಸಿನಲ್ಲಿ ಕೂರಿಸಿದರು ಎಂದಿದ್ದಾಳೆ. ನಂತರ ಚಾಲಕ ಬಸ್ ಅನ್ನು ಬಸ್ ನಿಲ್ದಾಣದಿಂದ ತೆಗೆದು ಬೈಪಾಸ್ ರಸ್ತೆಗೆ ಹಾಕಿದ್ದಾನೆ. ಇದೇ ಅನುಕ್ರಮದಲ್ಲಿ ಬಾಲಕಿಗೆ ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿ ಕುಡಿಸಿದ್ದಾನೆ. ಬಾಲಕಿ ಪ್ರಜ್ಞೆ ತಪ್ಪಿದ ಬಳಿಕ ಬಸ್ಸಿನಲ್ಲೇ ಅತ್ಯಾಚಾರವೆಸಗಿದ್ದಾರೆ. ಇದಾದ ಬಳಿಕ ಸಂತ್ರಸ್ತೆಯನ್ನು ಬಸ್ಸಿನಲ್ಲೇ ಬಿಟ್ಟು ಬೀಗ ಹಾಕಿ ಪರಾರಿಯಾಗಿದ್ದಾರೆ.
ಅಪ್ರಾಪ್ತ ಬಾಲಕಿಗೆ ಪ್ರಜ್ಞೆ ಬಂದಾಗ ಬಸ್ ಒಳಗಿನಿಂದ ಬಾಗಿಲು ಬಡಿದಿದ್ದಾಳೆ. ಈ ವೇಳೆ ದಾರಿಹೋಕರು ಬಸ್ನ ಬಾಗಿಲು ತೆರೆದು ಸ್ಥಳೀಯ ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದೇ ವೇಳೆಗೆ ಮಾಹಿತಿ ಪಡೆದ ಪೊಲೀಸರು ಅಪ್ರಾಪ್ತ ಬಾಲಕಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಬಾಲಕಿ ತನಗೆ ಸಾರಾಯಿ ಕುಡಿಸಿ ತನ್ನೊಂದಿಗೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆಯನ್ನು ವಿವರಿಸಿದ್ದಾಳೆ.
ಇದೀಗ ಇಬ್ಬರು ಆರೋಪಿಗಳ ಬಂಧನವಾಗಿದ್ದು, ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.