ಔರಂಗಾಬಾದ್ (ಬಿಹಾರ): ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ಮಂಗಳವಾರ ನಕಲಿ ಮದ್ಯ ಸೇವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಸಂಬಂಧ ಇದುವರೆಗೆ ಒಟ್ಟು 70 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಜಾರ್ಖಂಡ್ನಿಂದ ರಾಜ್ಯಕ್ಕೆ ಮದ್ಯ ತರಲಾಗಿತ್ತು ಎನ್ನಲಾಗಿದೆ.ಘಟನೆ ಬಗ್ಗೆ ಮಾತನಾಡಿದ ಔರಂಗಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸೌರಭ್ ಜೋರ್ವಾಲ್, ಔರಂಗಾಬಾದ್ ಜಿಲ್ಲೆಯಲ್ಲಿ ನಿನ್ನೆ ಇಬ್ಬರು ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ, 70 ಜನರನ್ನು ಬಂಧಿಸಲಾಗಿದೆ. ಇದಕ್ಕಾಗಿ 10 ತಂಡಗಳು ಕೆಲಸ ಮಾಡುತ್ತಿವೆ. ಜಾರ್ಖಂಡ್ನಿಂದ ಮದ್ಯ ತರಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.
ಏಪ್ರಿಲ್ 2016 ರಲ್ಲಿ ನಿತೀಶ್ ಕುಮಾರ್ ಸರ್ಕಾರವು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿತ್ತು.