Categories: ಬಿಹಾರ

ಬಿಹಾರ: `ನಕಲಿ ಮದ್ಯ’ ಸೇವಿಸಿ 5 ದಿನಗಳಲ್ಲಿ 13 ಮಂದಿ ಸಾವು

ಬಿಹಾರ: ಬಿಹಾರದ ಭಾಗಲ್ಪುರದಲ್ಲಿ ಕಳೆದ ಐದು ದಿನಗಳಲ್ಲಿ ನಕಲಿ ಮದ್ಯ ಸೇವಿಸಿ 13 ಮಂದಿ ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೇ ಇವರಲ್ಲಿ ನಿನ್ನೆ ಒಂದೇ ದಿನ ನಕಲಿ ಮದ್ಯ ಸೇವಿಸಿ ಐವರು ಮೃತಪಟ್ಟಿರುವ ಘಟನೆ ನಡೆದಿದೆ.

ಪೊಲೀಸ್ ಮೂಲಗಳ ಪ್ರಕಾರ, ಮೃತರನ್ನು ಸಬೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದನ್ ಝಾ, ಲೋದಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಿಶೋರ್ ಯಾದವ್, ನವೀನ್ ಯಾದವ್, ಬಾಬರ್ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ರಿತೇಶ್ ಕುಮಾರ್ ಮತ್ತು ಸಜೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಅವಿನಾಶ್ ಎಂದು ಗುರುತಿಸಲಾಗಿದೆ.

ಘಟನೆ ಬೆಳಕಿಗೆ ಬಂದಾಗ, ಮೃತರ ಕುಟುಂಬ ಸದಸ್ಯರು ಘಟನೆಯನ್ನು ಮರೆಮಾಚಲು ಶವಗಳನ್ನು ಸುಟ್ಟುಹಾಕಿದರು ಎಂದು ಅವರು ಬಹಿರಂಗಪಡಿಸಿದ್ದಾರೆ. ಘಟನೆಯಲ್ಲಿ ಇಬ್ಬರು ದೃಷ್ಟಿ ಕಳೆದುಕೊಂಡಿದ್ದಾರೆ.

ಇದೇ ರೀತಿಯ ಘಟನೆ ಮಾರ್ಚ್ 12 ರಂದು ನಡೆದಿದ್ದು, ಗೋಪಾಲಗಂಜ್ ಜಿಲ್ಲೆಯ ವೈಕುಂಠಪುರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ನಾಲ್ವರು ನಕಲಿ ಮದ್ಯ ಸೇವನೆಯಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Swathi MG

Recent Posts

ಇಂದು (ಏಪ್ರಿಲ್ 30) ಆಯುಷ್ಮಾನ್ ಭಾರತ್ ದಿನ ಆಚರಣೆ

ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು…

17 mins ago

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಬನ್ನೇರುಘಟ್ಟ ರಸ್ತೆಯ ಸಕಲವಾರ ಸಮೀಪ ನಡೆದಿದೆ.

34 mins ago

ಇಂದು ಚಿನ್ನದ ಬೆಲೆ ಕೊಂಚ ಇಳಿಕೆ: ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

ಕಳೆದ ಒಂದು ವಾರದಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತ ಮುಂದುವರಿಯುತ್ತಿದ್ದು, ಇಂದು ಚಿನ್ನದ ಬೆಲೆ ಕೊಂಚ ಕಡಿಮೆಯಾಗಿದ್ದು, ಪ್ರತಿ…

52 mins ago

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

9 hours ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

9 hours ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

9 hours ago