ಬಿಹಾರ : ಪ್ರಿಯಕರನೇ ಪ್ರಿಯತಮೆಯನ್ನು ಇಟ್ಟಿಗೆ ಮತ್ತು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆ ಬಿಹಾರದ ನಳಂದಾದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಮೃತ ಮಹಿಳೆ ಕಳೆದ ಎಂಟು ವರ್ಷಗಳಿಂದ ಪತಿಯನ್ನು ಬಿಟ್ಟು ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು.
ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಗುರುವಾರ ಮಹಿಳೆ ತನ್ನ ಮಕ್ಕಳಿಗೆ ಸಭೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದಳು. ಇದೀಗ ಶವವಾಗಿ ಪತ್ತೆಯಾಗಿದ್ದಾಳೆ.
ಪತ್ನಿ ಕನ್ಹಯ್ಯಾಗಂಜ್ ನಿವಾಸಿ ಮನೋಜ್ ಮಿಸ್ತ್ರಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಮಕ್ಕಳೊಂದಿಗೆ ಪ್ರಿಯತಮನ ಜೊತೆ ಬಾಡಿಗೆ ಮನೆಯಲ್ಲಿ ಇಬ್ಬರು ವಾಸವಾಗಿದ್ದರು. ಯಾವುದೋ ವಿಷಯಕ್ಕೆ ಇಬ್ಬರ ನಡುವೆ ಜಗಳ ನಡೆದು ಪ್ರಿಯಕರನೇ ಆಕೆಯನ್ನು ಕೊಂದು ಪರಾರಿಯಾಗಿದ್ದಾನೆ ಎಂದು ಮೃತ ಪತ್ನಿಯ ಪತಿ ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.