Categories: ಬಿಹಾರ

ಬೂಸ್ಟರ್ ಡೋಸ್ ಉಚಿತ; ಬಿಹಾರ ಘೋಷಣೆ

ಪಾಟ್ನಾ, ಏ. 19 ; ಕೇಂದ್ರ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪಡೆಯಲು ಅನುಮತಿ ನೀಡಿದೆ.

ಬಿಹಾರ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಉಚಿತವಾಗಿ ಬೂಸ್ಟರ್ ಡೋಸ್ ನೀಡಲು ಒಪ್ಪಿಗೆ ನೀಡಿದೆ. 18 ರಿಂದ 59 ವರ್ಷದೊಳಗಿನ ಎಲ್ಲರಿಗೂ ಉಚಿತವಾಗಿ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ನೀಡುವುದಾಗಿ ಬಿಹಾರ ಸರ್ಕಾರ ಘೋಷಣೆ ಮಾಡಿದೆ. ರಾಜ್ಯದ ಆರೋಗ್ಯ ಸಚಿವ ಮಂಗಲ್ ಪಾಂಡೆ 5.25 ಕೋಟಿ ಜನರು ಈ ಘೋಷಣೆ ಪ್ರಯೋಜನ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.

ಉಚಿತವಾಗಿ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ನೀಡಲು 1314 ಕೋಟಿ ರೂ.ಗಳನ್ನು ವೆಚ್ಚ ಮಾಡಲು ಬಿಹಾರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಬಿಸಿಎಫ್ ಅನುದಾನದ ಮೂಲಕ 583.43 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ.

ಬಿಹಾರ ಸರ್ಕಾರ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಈಗಾಗಲೇ ಉಚಿತವಾಗಿ ಬೂಸ್ಟರ್ ಡೋಸ್ ಲಸಿಕೆ ನೀಡುತ್ತಿದೆ. ಈಗ 18 ರಿಂದ 59ರ ವಯೋಮಾನದವರಿಗೂ ಉಚಿತವಾಗಿ ಬೂಸ್ಟರ್ ಡೋಸ್ ನೀಡುವುದಾಗಿ ಘೋಷಣೆ ಮಾಡಿದೆ.

ಭಾರತದ ವಿವಿಧ ರಾಜ್ಯಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಬಿಹಾರ ಸರ್ಕಾರ ಪರಿಸ್ಥಿತಿಯನ್ನು ಅವಲೋಕಿಸುತ್ತಿದೆ. ಕೋವಿಡ್ ಪರೀಕ್ಷೆಗಳ ಸಂಖ್ಯೆ ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆಸಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಕೋವಿಡ್ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವ ಕುರಿತು ಸೂಚನೆ ನೀಡಿದ್ದಾರೆ.

ಮಂಗಳವಾರದ ಕೇಂದ್ರ ಆರೋಗ್ಯ ಸಚಿವಾಲಯದ ಹೆಲ್ತ್ ಬುಲೆಟಿನ್ ಪ್ರಕಾರ ಭಾರತದಲ್ಲಿ 24 ಗಂಟೆಯಲ್ಲಿ 1,247 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದ ಸಕ್ರಿಯ ಪ್ರಕರಣಗಳು 11,860 ಆಗಿದೆ.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

8 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

8 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

8 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

9 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

9 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

9 hours ago