ಬಿಹಾರ

ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 205 ಆಮೆಗಳ ವಶಕ್ಕೆ ಪಡೆದ ಅಧಿಕಾರಿಗಳು

ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ರೈಲ್ವೇ ನಿಲ್ದಾಣದಿಂದ ದೆಹಲಿಗೆ ಹೊರಟಿದ್ದ ರೈಲಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಪರೂಪದ ಪ್ರಬೇಧಗಳ 205 ಆಮೆಗಳನ್ನು ರೈಲ್ವೇ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ನರ್ಕಟಿಯಾಗಂಜ್ ರೈಲು ನಿಲ್ದಾಣದಲ್ಲಿ ರೈಲು ನಿಲ್ಲಿಸಿದ್ದಾಗ ಅಧಿಕಾರಿಗಳು ಅಕ್ರಮ ಮದ್ಯ ಪತ್ತೆಗೆ ಪ್ರಯಾಣಿಕರ ತಪಾಸಣೆ ನಡೆಸುವಾಗ ದಿಂಬಿನ ಕವರ್‌ ಗಳಲ್ಲಿ ಆಮೆಗಳನ್ನು ತುಂಬಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಅಳಿವಿನಂಚಿನಲ್ಲಿರುವ ಅಪರೂಪದ ಪ್ರಬೇಧ ಸೇರಿದಂತೆ ಒಟ್ಟು 205 ಆಮೆಗಳನ್ನು ಸಾಗಿಸಲಾಗುತ್ತಿತ್ತು. ಈ ಜೀವಿಗಳನ್ನು ವನ್ಯಜೀವಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದೇವೆ. ಅವುಗಳನ್ನು ಜಲಮೂಲಗಳಿಗೆ ಬಿಡಲಿದ್ದಾರೆ ಎಂದು ರೈಲ್ವೇ ಅಧಿಕಾರಿ ಸಂತೋಷ್‌ ತಿಳಿಸಿದ್ದಾರೆ.

ಏಷ್ಯಾದ ದೇಶಗಳು ಮತ್ತು ಇತರೆಡೆಗಳಲ್ಲಿ ಔಷಧೀಯ ಉದ್ದೇಶಗಳಿಗಾಗಿ ಈ ಆಮೆಗಳಿಗೆ ಬೇಡಿಕೆಯಿದೆ. ಆ ಉದ್ದೇಶಗಳಿಗಾಗಿ ಅನೇಕ ಮಂದಿ ಆಮೆಗಳನ್ನು ಹಿಡಿದು ಕದ್ದು ಸಾಗಿಸುತ್ತಾರೆ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

5 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

6 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

7 hours ago