ಬಿಹಾರ

11 ಡೋಸ್‌ ಕೋವಿಡ್‌ ಲಸಿಕೆ ಪಡೆದ 84 ವರ್ಷದ ವೃದ್ಧ

ಮಧೇಪುರ :  ದೇಶದ ಬಹುಸಂಖ್ಯಾತ ವಯಸ್ಕರು ಇನ್ನೂ ಎರಡನೇ ಡೋಸ್‌ ಲಸಿಕೆಯನ್ನೇಪಡೆದಿಲ್ಲ. ಆದರೆ ಬಿಹಾರದ(Bihar) 84 ವರ್ಷದ ವೃದ್ಧ ಬ್ರಹ್ಮದೇವ್‌ ಮಂಡಲ್‌, ತಾವು 11 ಡೋಸ್‌ ಕೋವಿಡ್‌ ಲಸಿಕೆ ಪಡೆದಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ, 12ನೇ ಡೋಸ್‌ ಲಸಿಕೆ ತೆಗೆದುಕೊಳ್ಳುವಾಗ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ತನಿಖೆಗೆ ಸರ್ಕಾರ ಆದೇಶಿಸಿದೆ.

ಮಧೇಪುರ ಜಿಲ್ಲೆಯ ಓರಾಯ್‌ ಗ್ರಾಮದ ನಿವಾಸಿಯಾದ ಇವರು ಅಂಚೆ ಇಲಾಖೆಯ ನಿವೃತ್ತ ಉದ್ಯೋಗಿಯೂ ಹೌದು. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಡಲ್‌, ‘ಲಸಿಕೆಯಿಂದ ಬಹಳಷ್ಟು ಉಪಯೋಗವಾಗಿದೆ. ಹಾಗಾಗಿ ಪದೇ ಪದೇ ಲಸಿಕೆ ಪಡೆದೆ.

ಕಳೆದ ವರ್ಷ ಫೆ.13ರಂದು ಮೊದಲ ಡೋಸ್‌ ಸ್ವೀಕರಿಸಿದ್ದೆ. ಅನಂತರ ಡಿ.30ರ ಒಳಗೆ 11 ಡೋಸ್‌ ಲಸಿಕೆ ಪಡೆದೆ. ಲಸಿಕೆ ಪಡೆದ ದಿನಾಂಕ, ಸ್ಥಳವನ್ನೂ ಬರೆದಿಟ್ಟಿದ್ದೇನೆ. 8 ಬಾರಿ ಲಸಿಕೆ ಪಡೆಯಲು ನನ್ನ ಆಧಾರ್‌ ಮತ್ತು ಫೋನ್‌ ನಂಬರ್‌ ನೀಡಿದ್ದೆ. ನಂತರ ಮೂರು ಬಾರಿ ವೋಟರ್‌ ಐಡಿ ಮತ್ತು ಪತ್ನಿಯ ಮೊಬೈಲ್‌ ನಂಬರ್‌ ನೀಡಿದ್ದೆ’ ಎಂದು ತಿಳಿಸಿದ್ದಾರೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago