ಬಿಹಾರ: ಬಿಹಾರದಲ್ಲಿ ಜನತಾ ದಳ ಯುನೈಟೆಡ್ (ಜೆಡಿಯು) ನಾಯಕ ಸೌರಭ್ ಕುಮಾರ್ (33) ಅವರನ್ನು ಬಿಹಾರದ ರಾಜಧಾನಿ ಪಾಟ್ನಾದ ಪನ್ಪುನ್ನ ಪರ್ಸಾ ಬಜಾರ್ ಗ್ರಾಮದಲ್ಲಿ ನಿನ್ನೆ ರಾತ್ರಿ ಹತ್ಯೆ ಮಾಡಲಾಗಿದೆ.
ಅವರ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸ್ನೇಹಿತ ಮುನ್ಮುನ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊಲೀಸರು ಮೃತದೇಹವನ್ನು ತಮ್ಮ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆತನ ಸ್ನೇಹಿತ ಮುನ್ಮುನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೌರಭ್ ಕುಮಾರ್ ತನ್ನ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.
ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಗುಂಡು ತಗುಲಿದ ಪರಿಣಾಮ ಕುಮಾರ್ ಮೃತಪಟ್ಟಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೆಡಿಯು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪಕ್ಷವಾಗಿದ್ದು, ಸೌರಭ್ ಪಕ್ಷದ ಸರ್ವಾಂಗೀಣ ನಾಯಕರಾಗಿದ್ದರು.
ಸೌರಭ್ ಕುಮಾರ್ ಹತ್ಯೆಯ ಮಾಹಿತಿ ತಿಳಿದ ತಕ್ಷಣ ಪಟ್ಲಿಪುತ್ರ ಕ್ಷೇತ್ರದ ಪಕ್ಷದ ಅಭ್ಯರ್ಥಿ ಹಾಗೂ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರಿ ಮಿಸಾ ಭಾರತಿ ಅವರು ಸೌರಭ್ ಕುಮಾರ್ ಅವರ ಮನೆಗೆ ಮುಂಜಾನೆಯೇ ಆಗಮಿಸಿ ಸೌರಭ್ ಹತ್ಯೆಯ ನಂತರ ದುಃಖದಲ್ಲಿರುವ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದರು.