News Karnataka Kannada
Thursday, May 02 2024
ಬಿಹಾರ

ಸರಸ್ವತಿ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ

ಬಿಹಾರದ ದರ್ಭಂಗಾದಲ್ಲಿ ಸರಸ್ವತಿ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ  ನಡೆದಿದೆ.
Photo Credit : News Kannada

ಬಿಹಾರ: ಬಿಹಾರದ ದರ್ಭಂಗಾದಲ್ಲಿ ಸರಸ್ವತಿ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ  ನಡೆದಿದೆ.

ಮೂರ್ತಿ ಹಾಗೂ ಅಲ್ಲಿ ಸೇರಿದ್ದ ಜನರ ಮೇಲೆ ಕಲ್ಲು ತೂರಾಟ ನಡೆದಿದ್ದು, ಮೂರ್ತಿ ವಿಸರ್ಜನೆಯು ಇದೀಗ ಶಾಂತಿಯುತವಾಗಿ ಪೂರ್ಣಗೊಂಡಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ಎರಡೂ ಕಡೆಯ ಜನರು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಎರಡೂ ಕಡೆಯವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ರಾಜ್ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಇದುವರೆಗೆ 40 ಮಂದಿಯನ್ನು ಬಂಧಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು