ಗೋಪಾಲಗಂಜ್: ಬಿಹಾರದ ಗೋಪಾಲ್ಗಂಜ್ ಬಳಿ ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಐವರು ಗಾಯಗೊಂಡಿರುವ ಘಟನೆ ನಡೆದಿದೆ.
ಟ್ರಕ್, ಹಾಲಿನ ವಾಹನ ಮತ್ತು ಸ್ಕಾರ್ಪಿಯೋ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಮೂರು ವಾಹನಗಳ ಚಾಲಕರು ಹಾಗೂ ಸ್ಕಾರ್ಪಿಯೋದಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಅಪಘಾತದ ವಾಹನಗಳನ್ನು ರಸ್ತೆಯಿಂದ ತೆಗೆದು ಸಂಚಾರ ಸುಗಮಗೊಳಿಸಿದ್ದಾರೆ.
ಅಪಘಾತದಲ್ಲಿ ಟ್ರಕ್ ಚಾಲಕ ಗಾಯಗೊಂಡಿದ್ದು, ಘಟನೆ ಬಳಿಕ ಈತ ಪರಾರಿಯಾಗಿದ್ದಾನೆ. ಇನ್ನು ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮಹಮದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಸಾಹನ್ ಗ್ರಾಮದ ಬಳಿ ಎಸ್ಎಚ್-90 ಘಟನೆ ನಡೆದಿದೆ.