ಬಿಹಾರ

ಹೆರಿಗೆ ಬಳಿಕ ಹೊಟ್ಟೆಯಲ್ಲಿ ಸ್ಪಾಂಜ್‌ ಮರೆತುಬಿಟ್ಟ ಮರೆಗುಳಿ ವೈದ್ಯ

ಪಾಟ್ನಾ: ಸಿಸೇರಿಯನ್‌ ಹೆರಿಗೆ ನಂತರ ವೈದ್ಯರು ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಸರ್ಜಿಕಲ್‌ ಸ್ಪಾಂಜ್‌ ಅನ್ನು ಬಿಟ್ಟಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ.

ಜುಲೈನಲ್ಲಿ ಸದರ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಸುಲೇಖಾ ದೇವಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಿಸೇರಿಯನ್‌ ಹೆರಿಗೆಯಲ್ಲಿ ಅವರು ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದರು. ಈ ವೇಳೆ ವೈದ್ಯರು ಯಡವಟ್ಟೊಂದನ್ನು ಮಾಡಿದ್ದು, ಆಕೆಯ ಹೊಟ್ಟೆಯಲ್ಲಿ ಶಸ್ತ್ರಚಿಕಿತ್ಸಾ ಸ್ಪಂಜಿನ ತುಂಡನ್ನು ಹಾಗೆಯೇ ಬಿಟ್ಟಿದ್ದರು.

ಹೆರಿಗೆ ಬಳಿಕ ಸುಲೇಖಾ ಅವರಿಗೆ ತೀವ್ರ ಹೊಟ್ಟೆನೋವಿನ ಲಕ್ಷಣಗಳು ಕಾಣಿಸಿಕೊಳ್ಳಲು ಆರಂಭಿಸಿತು. ಹಲವಾರು ಔಷಧಗಳನ್ನು ನೀಡಿದ ಹೊರತಾಗಿಯೂ ಆಕೆ ಗುಣಮುಖರಾಗುವ ಯಾವುದೇ ಲಕ್ಷಣ ಕಂಡುಬಂದಿರಲಿಲ್ಲ. ಬಳಿಕ ಖಾಸಗಿ ಆಸ್ಪತ್ರೆಯ ವೈದ್ಯರು ಅಲ್ಟ್ರಾಸೌಂಡ್ ಮತ್ತು ಸಿಟಿ ಸ್ಕ್ಯಾನ್ ಮಾಡವಂತೆ ಸೂಚಿಸಿದ್ದು ಈ ವೇಳೆ ಸ್ಪಾಂಜ್‌ ಪತ್ತೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Sneha Gowda

Recent Posts

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

7 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

22 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

42 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

1 hour ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

2 hours ago