Categories: ಬಿಹಾರ

ಪಕ್ಷದ ಸ್ಥಾಪನಾ ದಿನ ಆಚರಣೆಗೆ ಗೂಳಿ ಮೇಲೇರಿದ ನಾಯಕ, ಮುಂದಾಗಿದ್ದೇ ಬೇರೆ

ಪಾಟ್ನಾ: ಆರ್‌ಜೆಡಿ ತನ್ನ 27 ನೇಯ ಸ್ಥಾಪನಾ ದಿನವನ್ನು ಬುಧವಾರ ಆಚರಿಸಿತು. ಈ ವೇಳೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಪಕ್ಷದ ನಾಯಕ ಕೇದಾರ್ ಯಾದವ್ ಸಂಭ್ರಮವನ್ನಾಚರಿಸಲು ಗೂಳಿಯ ಮೇಲೇರಿ ಕೇಕ್‌ ಕತ್ತರಿಸಲು ಮುಂದಾದರು.

ಪಕ್ಷದ ಕಾರ್ಯಕರ್ತರ ಜಯಘೋಷ ಮುಗಿಲು ಮುಟ್ಟುತ್ತಿದ್ದಂತೆ ಗೂಳಿ ಕೇದಾರ್ ಯಾದವ್ ಅವರನ್ನು ಕೆಳಕ್ಕೆಸೆದು ಅವರ ಮೇಲೆ ದಾಳಿಗೆ ಮುಂದಾಯಿತು.

ಈ ವೇಳೆ ಪಕ್ಷದ ಕಾರ್ಯಕರ್ತರು ಅವರನ್ನು ರಕ್ಷಿಸಿ ಸ್ಥಳದಿಂದ ಕರೆದೊಯ್ದರು. ಈ ಹಿಂದೆಯೂ ಕೇದಾರ್‌ ಹಲವು ಬಾರಿ ಗೂಳಿ ಮೇಲೆ ಮೆರವಣಿಗೆ ನಡೆಸಿದ್ದರು ಎಂದು ಕಾರ್ಯಕರ್ತರು ತಿಳಿಸಿದ್ದಾರೆ. ಪಕ್ಷದ ಸ್ಥಾಪನಾ ದಿನ ಸಂಭ್ರಮಾಚರಣೆಗೆ ಗೂಳಿಯನ್ನು ಬಲೂನ್‌ಗಳಿಂದ ಅಲಂಕರಿಸಿ ಸ್ಥಳಕ್ಕೆ ಕರೆತಂದಿದ್ದರು.

Sneha Gowda

Recent Posts

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

3 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

14 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

32 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

43 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago