News Karnataka Kannada
Sunday, May 05 2024
ಬಿಹಾರ

ದೇವಗಢ: ಇಂದು ಬಿಹಾರ, ಜಾರ್ಖಂಡ್‌ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

Modi to attend Deepotsav in Ayodhya
Photo Credit :

ದೇವಗಢ,ಜು. 12: ಇಂದು ಜಾರ್ಖಂಡ್‌ ಹಾಗೂ ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ,  ಜಾರ್ಖಂಡ್‌ನ‌ ಪ್ರಸಿದ್ಧ ಪುಣ್ಯ ಕ್ಷೇತ್ರವಾದ ದೇವಗಢದಲ್ಲಿ 16,000 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಮೋದಿ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಬಾಬಾ ವೈದ್ಯನಾಥ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. ದೇಗುಲದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ದಿಯೋಗಢದಲ್ಲಿ 400 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನೂ ಉದ್ಘಾಟಿಸಲಿದ್ದಾರೆ.

ನಗರದ ಏಮ್ಸ್‌ನಲ್ಲಿ ನಿರ್ಮಿಸಲಾಗಿರುವ ಒಳರೋಗಿಗಳ ವಿಭಾಗ, ಶಸ್ತ್ರಚಿಕಿತ್ಸಾ ಘಟಕವನ್ನೂ ಲೋಕಾರ್ಪಣೆಗೊಳಿಸಲಿದ್ದಾರೆ. ಉಳಿದಂತೆ 10,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ರಸ್ತೆಗಳು, 3,000 ಕೋಟಿ ರೂ. ವೆಚ್ಚದ ಶಕ್ತಿ ಮೂಲಸೌಕರ್ಯಗಳನ್ನೂ ಪ್ರಧಾನಿಯವರು ಉದ್ಘಾಟನೆ ಮಾಡಲಿದ್ದಾರೆ.

ನಂತರ ಬಿಹಾರಕ್ಕೆ ತೆರಳಲಿರುವ ಅವರು ಅಲ್ಲಿನ ವಿಧಾನಸಭೆಯ ಕಟ್ಟಡದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ಸ್ಥಾಪಿಸಲಾಗಿರುವ ಶತಾಬ್ದಿ ಸ್ಮತಿ ಸ್ತಂಬವನ್ನೂ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು