News Karnataka Kannada
Saturday, April 27 2024
ಬಿಹಾರ

ಆರ್ ಎಸ್‍ಎಸ್  ಮುಖ್ಯಸ್ಥ ಮೋಹನ್ ಭಾಗವತ್ ಮೇಲೆ ದಾಳಿ ಎಚ್ಚರಿಕೆ

RSS chief Mohan Bhagwat warned of attack
Photo Credit : News Kannada

ಪಾಟ್ನಾ: ಪಾಕಿಸ್ತಾನದ  ಗುಪ್ತಚರ ಸಂಸ್ಥೆ ಐಎಸ್‍ಐ ಹಾಗೂ ಇಸ್ಲಾಮಿಕ್ ಭಯೋತ್ಪಾದಕರಿಂದ ಆರ್ ಎಸ್‍ಎಸ್  ಮುಖ್ಯಸ್ಥ ಮೋಹನ್ ಭಾಗವತ್  ಮೇಲೆ ದಾಳಿ ನಡೆಯುವ ಸಾಧ್ಯತೆಗಳಿವೆ ಗುಪ್ತಚರ ಇಲಾಖೆಯು ಮಾಹಿತಿ ನೀಡಿದೆ.

ಕಾರ್ಯಕ್ರಮಗಳಲ್ಲಿ ಭಾಗಿಯಾಗಲೆಂದು ಎರಡು ದಿನಗಳ ಭೇಟಿಗಾಗಿ ಪಾಟ್ನಾಗೆ ಆಗಮಿಸಿರುವ ಭಾಗವತ್ ಅವರಿಗೆ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.

ಮೋಹನ್ ಭಾಗವತ್ ಅವರು ಈಗಾಗಲೇ ಝಡ್ ಮಾದರಿಯ ಭದ್ರತೆಯನ್ನು ಹೊಂದಿದ್ದಾರೆ. ಗುಪ್ತಚರ ಇಲಾಖೆಯ ಎಚ್ಚರಿಕೆಯಿಂದಾಗಿ ಮೋಹನ್ ಭಾಗವತ್ ಅವರಿಗೆ ಎಲ್ಲಾ ರೀತಿಯ ಭದ್ರತೆಗಳನ್ನು ಒದಗಿಸಲಾಗುತ್ತಿದೆ ಎಂದು ಬಿಹಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು