ಪಾಟ್ನಾ: ಪಾಟ್ನಾದ ಕಂಕರ್ಬಾಗ್ ಬೈಪಾಸ್ ಬಳಿ ಕ್ರೇನ್ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ವೇಳೆ ಓರ್ವ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ.
ಪೊಲೀಸ್ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಅಪಘಾತದ ಭೀಕರತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಪಾಟ್ನಾದ ಸೆಂಟ್ರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಸಾವನ್ನಪ್ಪಿದ್ದಾರೆ.
ಬೆಳಗ್ಗೆ 3.44 ರ ಸುಮಾರಿಗೆ ಮಿಥಾಪುರದಿಂದ ಝೀರೋ ಮೈಲ್ ಕಡೆಗೆ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಆಟೋ, ಮೊಟ್ರೋ ಕಾಮಗಾರಿಯಲ್ಲಿ ನಿರತವಾಗಿದ್ದ ಕ್ರೇನ್ಗೆ ಡಿಕ್ಕಿ ಹೊಡೆದಿದೆ.
ದುರ್ಘಟನೆಯಲ್ಲಿ ಮುಕೇಶ್ ಕುಮಾರ್ ಎಂಬಾತ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.