Categories: ಬಿಹಾರ

ಹಿಮ್ಮುಖವಾಗಿ ಚಲಿಸಿದ ರೈಲು: ಪ್ರಯಾಣಿಕರು ಕಕ್ಕಾಬಿಕ್ಕಿ

ಬಿಹಾರ: ಪ್ರಯಾಣಿಕ ರೈಲೊಂದು ಬರೋಬ್ಬರಿ 500 ಮೀಟರ್ ಹಿಮ್ಮುಖವಾಗಿ ಚಲಿಸಿದ ಪ್ರಸಂಗ ನಡೆದಿದೆ. ಅ.18 ರಂದು ಬಿಹಾರದ ಸರನ್ ಜಿಲ್ಲೆಯ ಮಾಂಝೀ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

Farrukhabad-bound-15083 ಉತ್ಸರ್ಗ್​ ಎಕ್ಸ್​ಪ್ರೆಸ್ ರೈಲು ಮಾಂಝಿ ಸ್ಟೇಷನ್​​ಗೆ ಬರುತ್ತಿತ್ತು. ಪ್ರಯಾಣಿಕರು ರೈಲನ್ನು ಹತ್ತಲು ನಿಲ್ದಾಣದಲ್ಲಿ ಕಾದು ನಿಂತಿದ್ದರು. ಆದರೆ, ರೈಲು ನಿಲ್ದಾಣದಲ್ಲಿ ನಿಲ್ಲಲಿಲ್ಲ. ಬದಲಾಗಿ 500 ಮೀಟರ್ ದೂರ ಹೋಗಿ ನಿಂತಿದೆ. ಲೋಕೋ ಪೈಲೆಟ್​ಗೆ ಈ ವಿಚಾರ ಅರಿವಿಗೆ ಬರುತ್ತಿದ್ದಂತೆಯೇ ರೈಲನ್ನು ಹಿಮ್ಮುಖವಾಗಿ ಚಲಾಯಿಸಿ ಪ್ರಯಾಣಿಕರನ್ನು ಕರೆದುಕೊಂಡು ಬಂದಿದ್ದಾರೆ ಎಂದು ವರದಿಯಾಗಿದೆ.

ಲೋಕೋ ಪೈಲೆಟ್ ದಯಾಶಂಕರ್ ಮತ್ತು ರೈಲಿನ ಮ್ಯಾನೇಜರ್ ಎಸ್​.ಕೆ.ಶ್ರೀವತ್ಸವ್​​ ರೈಲನ್ನು ರಿವರ್ಸ್​ ಮಾಡಿ, ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗಿದ್ದಾರೆ. ಇದರಿಂದ 20 ನಿಮಿಷ ರೈಲು ಪ್ರಯಾಣದಲ್ಲಿ ವಿಳಂಭವಾಗಿದೆ. ಇನ್ನು ಯಾಕೆ ಹಾಗೆ ಆಯಿತು ಎಂದು ನಾವು ತನಿಖೆ ನಡೆಸುತ್ತಿದ್ದೇವೆ ಎಂದು ವಾರಣಸಿ ಪಿಆರ್​ಒ ಅಶೋಕ್ ಕುಮಾರ್ ತಿಳಿಸಿದ್ದಾರೆ.

Ashika S

Recent Posts

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

10 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

29 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

9 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

9 hours ago