Categories: ಬಿಹಾರ

ಪಾಟ್ನಾದಲ್ಲಿ ತಾತ್ಕಾಲಿಕ ತಡೆಗೋಡೆಗೆ ಪಿಕ್ ಅಪ್ ಡಿಕ್ಕಿ, ಇಬ್ಬರು ಸಾವು

ಪಾಟ್ನಾ, ಮೇ.19: ಪಿಕ್ ಅಪ್ ತಾತ್ಕಾಲಿಕ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಪಾಟ್ನಾದ ಹೊರವಲಯದ ಬಿಹ್ತಾ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಪಿಕ್ ಅಪ್ ವ್ಯಾನ್ ನಲ್ಲಿದ್ದವರು ಗುರುವಾರ ತಡರಾತ್ರಿ ಮದುವೆ ಸಮಾರಂಭದ ನಂತರ ಬಿಹ್ತಾದಿಂದ ಹಿಂದಿರುಗುತ್ತಿದ್ದರು. ಘಟನೆಯಲ್ಲಿ ವಧುವಿನ 15 ವರ್ಷದ ಸಹೋದರ ಸಹ ಪ್ರಾಣ ಕಳೆದುಕೊಂಡಿದ್ದಾನೆ.

ಬಿಹ್ತಾ ಪೊಲೀಸ್ ಠಾಣೆ ವ್ಯಾಪ್ತಿಯ ಪಥೋಲಿಯಾ ಒಡ್ಡಿನಲ್ಲಿ ಅಪಘಾತ ಸಂಭವಿಸಿದೆ ಎಂದು ಎಸ್ಎಚ್ಒ ಪ್ರಮೋದ್ ಕುಮಾರ್ ತಿಳಿಸಿದ್ದಾರೆ. ತಿಲಕ ಸಮಾರಂಭದ ನಂತರ ಜನರು ಮನೆಗೆ ಹಿಂದಿರುಗುತ್ತಿದ್ದಾಗ ವಾಹನದ ಚಾಲಕ ನಿಯಂತ್ರಣ ಕಳೆದುಕೊಂಡು ತಾತ್ಕಾಲಿಕ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದಾನೆ.

“ಕೆಲವು ಜನರು ವ್ಯಾನ್ ನ ಮೇಲ್ಛಾವಣಿಯ ಮೇಲೆ ಕುಳಿತಿದ್ದರು. ವಾಹನವು ತಡೆಗೋಡೆಗೆ ಡಿಕ್ಕಿ ಹೊಡೆದಾಗ, ಅವರು ಕೆಳಗೆ ಬಿದ್ದರು” ಎಂದು ಕುಮಾರ್ ಹೇಳಿದರು.

“ವಾಹನದ ಚಾಲಕ ಸ್ಥಳದಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ. ಆತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ” ಎಂದು ಅವರು ಹೇಳಿದರು.

“ಮಾಹಿತಿ ಪಡೆದ ತಂಡವು ತಕ್ಷಣ ಸ್ಥಳಕ್ಕೆ ಧಾವಿಸಿ ಅವರನ್ನು ರಕ್ಷಿಸಿತು. ವಿವೇಕ್ ಕುಮಾರ್ (40) ಸ್ಥಳದಲ್ಲೇ ಮೃತಪಟ್ಟರೆ, ನಟಕ್ ಮಹತೋ (40) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಕುಮಾರ್ ತಿಳಿಸಿದ್ದಾರೆ.

ಮೃತರು ಸರನ್ ಜಿಲ್ಲೆಯ ಡೋರಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ದಯಾಳ್ಚಕ್ ಗ್ರಾಮದವರು.

Gayathri SG

Recent Posts

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

25 mins ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

54 mins ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

1 hour ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

2 hours ago

ಜಾತಿಗಿಂತ‌ ದೇಶದ ಹಿತ‌ ಮುಖ್ಯ: ವಿಜಯ್ ಜೋಶಿ ಮನವಿ

ಕಳೆದ 25 ವರ್ಷಗಳಿಂದ ವಿಜಯಪುರ ಜಿಲ್ಲೆಯ ಪ್ರಬುದ್ಧ ಮತದಾರರು ಯಾವುದೇ ಜಾತಿ, ಮತ, ಪಂಥ ನೋಡದೇ ಜಾತಿಗಿಂತ ದೇಶದ ಹಿತವೇ…

3 hours ago

ಪ್ರತಿ ಬೂತ್ ನಲ್ಲಿ ಬಿಜೆಪಿ ಪರ ಅಲೆ, ಕಾರ್ಯಕರ್ತರಲ್ಲಿ ಅತ್ಯುತ್ಸಾಹ : ಪ್ರಕಾಶ ಅಕ್ಕಲಕೋಟ.

ವಿಜಯಪುರ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಬೂತ್ ಗಳಲ್ಲಿ ಬಿಜೆಪಿ‌ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಬಿಜೆಪಿ ಪರ‌ ಅಲೆ‌ ಇದೆ…

3 hours ago