ಪಟ್ನಾ: ಪೊಲೀಸರ ಮುಂದೆಯೇ ಅಪರಿಚಿತ ವ್ಯಕ್ತಿಗಳು ಫೈರಿಂಗ್ ನಡೆಸಿದ್ದಾರೆ. ಇಬ್ಬರು ಕೈದಿಗಳ ಮೇಲೆ ಫೈರಿಂಗ್ ಮಾಡಿರುವ ಘಟನೆ ಬಿಹಾರದ ಧನಾಪುರ ಕೋರ್ಟ್ನಲ್ಲಿ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ಕೈದಿ ಗಾಯಗೊಂಡಿದ್ದಾರೆ. ಪೊಲೀಸರು ವಿಚಾರಣೆಗೆಂದು ಕೋರ್ಟ್ಗೆ ಕರೆದುಕೊಂಡು ಬರುತ್ತಿರುವಾಗ ದುಷ್ಕರ್ಮಿಗಳು ಫೈರಿಂಗ್ ಮಾಡಿದ್ದಾರೆ. ಗಾಯಗೊಂಡಿರುವ ಕೈದಿಯನ್ನು ಆಸ್ಪತ್ರೆ ಕರೆದುಕೊಂಡು ಹೋಗಲಾಗಿದೆ.
ಛೋಟೆ ಸರ್ಕಾರ್ ಸಿಕಂದರ್ಪುರದ ನಿವಾಸಿಯಾಗಿದ್ದು ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದ. ಆತನನ್ನು ನಗರದ ಬೇರ್ ಜೈಲಿನಲ್ಲಿ ಇರಿಸಲಾಗಿದ್ದು, ಇಂದು ಕೋರ್ಟ್ಗೆ ಹಾಜರುಪರಿಸಲು ಕರೆತರಲಾಗುತ್ತಿತ್ತು. ವಿಚಾರಣಾಧೀನ ಕೈದಿಯಾಗಿದ್ದ ಛೋಟೆ ಸರ್ಕಾರ್ನನ್ನು ದಾನಪುರ ನ್ಯಾಯಾಲಯಕ್ಕೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಇಬ್ಬರು ದುಷ್ಕರ್ಮಿಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದೆ.