ಬಿಹಾರ

ಕಾಂಗ್ರೆಸ್​ ಶಾಸಕಿ ಮನೆಯಲ್ಲಿ ಯುವಕನ ಶವ ಪತ್ತೆ

ಬಿಹಾರ: ಬಿಹಾರದ ಕಾಂಗ್ರೆಸ್ ಶಾಸಕಿ ನೀತು ಸಿಂಗ್ ಅವರ ಮನೆಯಲ್ಲಿ 24 ವರ್ಷದ ಯುವಕನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಿಯೂಷ್ ಸಿಂಗ್, ನೀತು ಸಿಂಗ್ ಅವರ ದೂರದ ಸಂಬಂಧಿಯಾಗಿದ್ದು, ಪೊಲೀಸರು ಶವವನ್ನು ಪತ್ತೆ ಮಾಡಿದಾಗ ಶಾಸಕಿ ಅವರ ಮನೆಯಲ್ಲಿ ಇರಲಿಲ್ಲ ಎಂದು ನಾವಡಾ ಪೊಲೀಸ್ ವರಿಷ್ಠಾಧಿಕಾರಿ ಅಂಬರೀಶ್ ರಾಹುಲ್ ತಿಳಿಸಿದ್ದಾರೆ.

ನೀತು ಸಿಂಗ್ ಅವರ ಸೋದರಳಿಯ ಗೋಲು ಸಿಂಗ್ ಅವರಿಗೆ ಸೇರಿದ ಕೋಣೆಯಲ್ಲಿ ಪಿಯೂಷ್ ಸಿಂಗ್ ಅವರ ಶವ ಬಿದ್ದಿತ್ತು. ಪೊಲೀಸರು ಪ್ರಕರಣದ ತನಿಖೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಜ್ಞರು ಮತ್ತು ಶ್ವಾನ ದಳವನ್ನು ಸಹಾಯ ಪಡೆದಿದ್ದಾರೆ. ಇನ್ನು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ನೀತು ಸಿಂಗ್ ಅವರ ಮನೆಯಲ್ಲಿ ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.

Gayathri SG

Recent Posts

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

16 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

44 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 hours ago