Categories: ದೇಶ

ಬರ್ತಡೇ ಕೇಕ್‌ ಕಟ್‌ ಮಾಡಿ ತಿಂದ ಬಾಲಕಿ ಸಾವು : ಸಹೋದರಿ ಗಂಭೀರ

ಚಂಡೀಗಢ : ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ 10 ವರ್ಷದ ಬಾಲಕಿ ಆನ್​ಲೈನ್​ನಲ್ಲಿ ಆರ್ಡರ್ ಮಾಡಿದ್ದ ಕೇಕ್​ ಕಟ್ ಮಾಡಿ, ಅದನ್ನ ತಿಂದ ನಂತರ ಸಾವನ್ನಪ್ಪಿರುವ ಘಟನೆ ಪಂಜಾಬ್​ನ ಪಟಿಯಾಲ ನಗರದಲ್ಲಿ ನಡೆದಿದೆ. ಪಟಿಯಾಲ ನಗರದ ನಿವಾಸಿ ಮನ್ವಿ (10) ಮೃತಪಟ್ಟಿರುವ ದುರ್ದೈವಿ.

ಮಗಳ ಬರ್ತಡೇ ಎಂದು ಪೋಷಕರು ಒನ್‌ಲೈನ್‌ಲ್ಲಿ ಕೇಕ್‌ ಆರ್ಡರ್‌ ಮಾಡಿದ್ದರು,ರಾತ್ರಿ 8, 9 ಗಂಟೆ ಸುಮಾರಿಗೆ ಕೇಕ್ ಡೆಲವರಿ ಮಾಡಲಾಗಿದ್ದು ಬಾಲಕಿ ಮನೆಯಲ್ಲೇ ಖುಷಿ, ಖುಷಿಯಾಗಿ ಕೇಕ್ ಕಟ್ ಮಾಡಿದ್ದಾಳೆ. ಬಳಿಕ ಕೇಕ್ ಅನ್ನು​ ಬಾಲಕಿ, ಆಕೆಯ ತಂಗಿ ಹಾಗೂ ಪೋಷಕರು ಕೂಡ ತಿಂದಿದ್ದಾರೆ.

ಬಳಿಕ ರಾತ್ರಿ 3 ಗಂಟೆ ಸುಮಾರಿಗೆ ಏಕಾಏಕಿ ಬಾಲಕಿ ಮತ್ತು ಈಕೆಯ ತಂಗಿಗೆ ವಾಂತಿಯಾಗಿದೆ. ಇದರಿಂದ ತಕ್ಷಣ ಪೋಷಕರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದ್ರೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಬಾಲಕಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಸಹೋದರಿ ಇನ್ನು ಚಿಕಿತ್ಸೆ ಪಡೆಯುತ್ತಿದ್ದಾಳೆ. ಕೇಕ್ ತಿಂದಿದ್ದ ಮನೆಯವರು ಕೂಡ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.

 

 

Nisarga K

Recent Posts

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

14 mins ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

28 mins ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

45 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

1 hour ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

2 hours ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

2 hours ago