Categories: ದೇಶ

ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಉಚಿತ ಚಿಕಿತ್ಸೆ, ಬಡವರಿಗೆ ಉಚಿತ ಪಡಿತರ

ದೆಹಲಿ: ಇನ್ನುಮುಂದೆ 70 ವರ್ಷ ಮೇಲ್ಪಟ್ಟವರು ಕೂಡ ಆಯುಷ್ಮಾನ್ ಭಾರತ ಯೋಜನೆಗೆ ಒಳಪಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಭಾರತೀಯ ಜನತಾ ಪಕ್ಷವು ಮುಂಬರಲಿರುವ ಲೋಕಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ವಯಸ್ಸಾದಂತೆ ಕಾಯಿಲೆಗಳು ಕೂಡ ಹೆಚ್ಚು ಹೀಗಾಗಿ ಇನ್ನುಮುಂದೆ ವೃದ್ಧರು ಚಿಂತಿಸಬೇಕಿಲ್ಲ, 70 ವರ್ಷ ಮೇಲ್ಪಟ್ಟವರೂ ಕೂಡ ಇನ್ನುಮುಂದೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ದೊರೆಯಲಿದೆ. ಜನೌಷಧಿ ಕೇಂದ್ರಗಳಲ್ಲಿ ಶೇ.80ರಷ್ಟು ರಿಯಾಯಿತಿಯೊಂದಿಗೆ ಔಷಧ ವಿತರಣೆ ಮಾಡಲಿದ್ದೇವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ದೇಶದ 10 ಕೋಟಿ ರೈತರು ಭವಿಷ್ಯದಲ್ಲಿಯೂ ಪಿಎಂ-ಕಿಸಾನ್ ಸಮ್ಮಾನ್ ನಿಧಿಯ ಪ್ರಯೋಜನಗಳನ್ನು ಪಡೆಯಲಿದ್ದಾರೆ. ಪೈಪ್ ಮೂಲಕ ಗ್ಯಾಸ್ ತಲುಪಿಸುವ ಕೆಲಸ ಮಾಡಲಾಗುವುದು. ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಭರವಸೆಯೊಂದಿಗೆ ನಾವು ಮುಂದುವರಿಯುತ್ತೇವೆ ಎಂದಿದ್ದಾರೆ.

ಮುದ್ರಾ ಯೋಜನೆಯಡಿ ಮೊದಲ ಸಾಲ 10 ಲಕ್ಷ ರೂ. ಇದೀಗ ಬಿಜೆಪಿ ಈ ಮಿತಿಯನ್ನು 20 ಲಕ್ಷಕ್ಕೆ ಹೆಚ್ಚಿಸಲು ನಿರ್ಧರಿಸಿದೆ.

ಬಿಜೆಪಿ ವಂದೇ ಭಾರತ್ ರೈಲುಗಳನ್ನು ದೇಶದ ಮೂಲೆ ಮೂಲೆಗೆ ವಿಸ್ತರಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದರು. ವಂದೇ ಭಾರತ್‌ನ ಮೂರು ಮಾದರಿಗಳು ದೇಶದಲ್ಲಿ ನಡೆಯಲಿವೆ. ಉತ್ತರ ಭಾರತದಲ್ಲಿ ಒಂದು ಬುಲೆಟ್ ರೈಲು, ದಕ್ಷಿಣ ಭಾರತದಲ್ಲಿ ಒಂದು ಬುಲೆಟ್ ರೈಲು ಮತ್ತು ಪೂರ್ವ ಭಾರತದಲ್ಲಿ ಒಂದು ಬುಲೆಟ್ ರೈಲು ಓಡಲಿದೆ. ಇದಕ್ಕಾಗಿ ಸರ್ವೆ ಕಾರ್ಯವೂ ಶೀಘ್ರ ಆರಂಭವಾಗಲಿದೆ.

ಮಂಗಳಮುಖಿಯರಿಗೂ ಆಯುಷ್ಮಾನ್‌ ಭಾರತ್‌ ಯೋಜನೆ ಅಡಿ ಉಚಿತ ಚಿಕಿತ್ಸೆ, 10 ಕೋಟಿ ಮಹಿಳೆಯರಿಗೆ ಉದ್ಯೋಗ, ಉದ್ಯಮ ಕುರಿತು ಕೌಶಲ ತರಬೇತಿ, ಮೂರು ಕೋಟಿ ಮಹಿಳೆಯರಿಗೆ ಲಕ್‌ಪತಿ ದೀದಿ ಯೋಜನೆಯ ಗ್ಯಾರಂಟಿ, ರೈತರಿಗೆ ಪಿಎಂ ಕಿಸಾನ್‌ ಯೋಜನೆ ಅಡಿಯಲ್ಲಿ ಹಣ ವರ್ಗಾವಣೆ ಮುಂದುವರಿಕೆ, ದೇಶಾದ್ಯಂತ ಡೇರಿ ಸಹಕಾರ ಸಂಘಗಳನ್ನು ಹೆಚ್ಚಿಸಲಾಗುವುದು, ಕ್ರೀಡೆಯಲ್ಲಿ ಸ್ತ್ರೀಯರ ಪ್ರಾತಿನಿಧ್ಯ ಹೆಚ್ಚಿಸಲು ಹೊಸ ಯೋಜನೆ, ತಮಿಳು ಭಾಷೆಯ ವೈಶಿಷ್ಟ್ಯ ಸಾರಲು ಆದ್ಯತೆ, ಉದ್ಯೋಗ ಖಾತರಿ,

2036 ರಲ್ಲಿ ಒಲಿಂಪಿಕ್ಸ್ ಆತಿಥ್ಯ, 3 ಕೋಟಿ ಲಕ್​ಪತಿ ದೀದಿ ಮಾಡುವ ಗುರಿ, ಮಹಿಳಾ ಮೀಸಲಾತಿ ಜಾರಿಗೊಳಿಸುವ ಭರವಸೆ, ಕೃಷಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು, ಮೀನುಗಾರರಿಗೆ ಯೋಜನೆ, ಇ-ಶ್ರಮ್ ಮೂಲಕ ಕಲ್ಯಾಣ ಯೋಜನೆಯ ಪ್ರಯೋಜನ, 2025 ಬುಡಕಟ್ಟು ಹೆಮ್ಮೆಯ ವರ್ಷ, ಪ್ರತಿ ಕ್ಷೇತ್ರದಲ್ಲೂ ಒಬಿಸಿ-ಎಸ್‌ಸಿ-ಎಸ್‌ಟಿಗೆ ಗೌರವ, ಜಾಗತಿಕ ಉತ್ಪಾದನಾ ಕೇಂದ್ರ ರಚಿಸಲು ಸಿದ್ಧತೆ, ಪ್ರಪಂಚದಾದ್ಯಂತ ರಾಮಾಯಣ ಹಬ್ಬ, ಅಯೋಧ್ಯೆಯ ಅಭಿವೃದ್ಧಿ, ಒಂದು ರಾಷ್ಟ್ರ, ಒಂದು ಚುನಾವಣೆ, ಈಶಾನ್ಯ ಭಾರತದ ಅಭಿವೃದ್ಧಿ ಹಾಗು AI, ಸೆಮಿಕಂಡಕ್ಟರ್ ಮತ್ತು ಬಾಹ್ಯಾಕಾಶ ವಲಯದಲ್ಲಿ ಅಭಿವೃದ್ಧಿ ಕುರಿತ ಪ್ರಣಾಳಿಕೆಯಲ್ಲಿ ಉಲ್ಲೇಖ ಮಾಡಿದ್ದಾರೆ.

Ashitha S

Recent Posts

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

10 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

26 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

50 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

1 hour ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

1 hour ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

2 hours ago