ಭೋಪಾಲ್: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಹೋದಲ್ಲಿ ಬಂದಲ್ಲಿ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್, ಮೋದಿ ಮೋದಿ ಘೋಷಣೆಗಳನ್ನು ಕೂಗುವುದನ್ನು ನೋಡಿರುತ್ತೀರಿ. ಹೀಗೆ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರಿಗೆ ಈ ಹಿಂದೆ ರಾಹುಲ್ ಗಾಂಧಿ ಹಸ್ತಲಾಘವ ಮಾಡಿದ್ದರು. ಆದರೆ, ಈ ಬಾರಿ ಶೇಕ್ ಹ್ಯಾಂಡ್ ಕೊಡಲು ಬಂದ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಆಲೂಗಡ್ಡೆ (ಬಟಾಟೆ) ನೀಡಿದ್ದಾರೆ.
ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತೆರೆದ ವಾಹನದಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಎದುರಾದ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಲು ಆರಂಭಿಸಿದ್ದಾರೆ. ಕೂಡಲೇ ವಾಹನವನ್ನು ನಿಲ್ಲಿಸುವಂತೆ ಹೇಳಿದ ರಾಹುಲ್ ಗಾಂಧಿ, ವಾಹನದಿಂದ ಇಳಿದು ನೇರವಾಗಿ ಬಿಜೆಪಿ ಕಾರ್ಯಕರ್ತರಿದ್ದಲ್ಲಿಗೆ ಹೋಗಿ ಹಸ್ತಲಾಘವ ಮಾಡಿದರು. ಈ ವೇಳೆ ಕೆಲವು ಕಾರ್ಯಕರ್ತರು ರಾಹುಲ್ ಗೆ ಚಿನ್ನ ತಯಾರಿಸಲು ಆಲೂಗಡ್ಡೆಯನ್ನು ನೀಡಿದರು.
ರಾಹುಲ್ ಗಾಂಧಿ ಅವರು 2017 ರಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಗುಜರಾತ್ ಭಾಷಣ ಮಾಡಿದ ರಾಹುಲ್ ಗಾಂಧಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ವಿಡಿಯೋದಲ್ಲಿ, “ಮೆಷೀನ್ನ ಈ ಕಡೆಯಿಂದ ಆಲೂಗಡ್ಡೆ ಹಾಕಿದರೆ ಆಕಡೆಯಿಂದ ಚಿನ್ನ ಬರುತ್ತದೆ” ಎಂದು ಹೇಳಿರುವುದು ಸಾಕಷ್ಟು ಸದ್ದು ಮಾಡಿತ್ತು. ಅದರ ಪ್ರತಿಯಾಗಿ ಇಂದು ಬಿಜೆಪಿ ಕಾರ್ಯರ್ತರು ಹೀಗೆ ಆಲೂಗಡ್ಡೆ ನೀಡಿರ ಬಹುದು ಎಂದು ಊಹಿಸಲಾಗ್ತಿದೆ.
ಅಂಡ್ ಭಕ್ತರು ಎರಡು ನಿಮಿಷದಲ್ಲಿ #RahulGandhi ಅವರನ್ನು ಕಂಡು ಬದಲಾಗುವ ಸನ್ನಿವೇಶ 🤩 pic.twitter.com/hvyajIUslS
— Goudrusarkar – ಗೌಡ್ರುಸರ್ಕಾರ್ (@Gs_0107) March 5, 2024