ದೆಹಲಿ: ದೆಹಲಿ ಹೈಕೋರ್ಟ್ಗೆ ಬಾಂಬ್ ಬೆದರಿಕೆ ಬಂದಿದೆ. ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದೆ. ಇದೀಗ ದೆಹಲಿ ಹೈಕೋರ್ಟ್ನಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ.
ರಿಜಿಸ್ಟ್ರಾರ್ ಜನರಲ್ಗೆ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಬುಧವಾರ ತಡರಾತ್ರಿ ಈ ಮೇಲ್ ಬಂದಿದ್ದು, ಹೈಕೋರ್ಟ್ ಮುಂದೆ ಬಾಂಬ್ ಹಾಕಲಾಗುವುದು ಎಂದು ಇದರಲ್ಲಿ ತಿಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.