News Karnataka Kannada
Friday, May 10 2024
ದೇಶ

ಆಳವಾದ ಕಂದಕಕ್ಕೆ ಉರುಳಿ ಬಿದ್ದ ಬಸ್‌: ಮೃತರ ಸಂಖ್ಯೆ 36ಕ್ಕೆ ಏರಿಕೆ

Dodaa
Photo Credit : News Kannada

ಶ್ರೀನಗರ: ಆಳವಾದ ಕಂದಕಕ್ಕೆ ಬಸ್ ಉರುಳಿ ಬಿದ್ದ ಭೀಕರ ರಸ್ತೆ ಅಪಘಾತ ಜಮ್ಮು, ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಕನಿಷ್ಟ 10 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಪ್ರಾಥಮಿಕ ಮಾಹಿತಿ ಪ್ರಕಾರ ಬಸ್ ಕಂದಕಕ್ಕೆ ಉರುಳಿ ಬೀಳಲು ಕಾರಣವೇನು ಅನ್ನೋದು ಗೊತ್ತಾಗಿಲ್ಲ. 10 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಇದೀಗ ಸಾವಿನ ಸಂಕ್ಯೆ 36ಕ್ಕೆ ಏರಿಕೆಯಾಗಿದೆ.  ಘಟನಾ ಸ್ಥಳಕ್ಕೆ ಪೊಲೀಸರು, ರಕ್ಷಣಾ ಪಡೆಗಳು ಆಗಮಿಸಿದ್ದು ರಕ್ಷಣಾ ಕೆಲಸ ಮುಂದುವರೆದಿದೆ ಎಂದು ತಿಳಿದು ಬಂದಿದೆ.

ಇನ್ನು ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಇನ್ನು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ಪಿಎಂಎನ್‌ಆರ್‌ಎಫ್ನಿಂದ 2 ಲಕ್ಷ ರೂ. ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು