News Karnataka Kannada
Thursday, May 02 2024
ದೇಶ

ಸುಪ್ರೀಂ ಕೋರ್ಟ್‌ಗೆ ಇಬ್ಬರು ನ್ಯಾಯಮೂರ್ತಿಗಳ ನೇಮಕ

judges
Photo Credit : Twitter

ವದೆಹಲಿ: ತೆಲಂಗಾಣ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ಕೇರಳ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ವೆಂಕಟನಾರಾಯಣ ಭಟ್ಟಿ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ಕೇಂದ್ರ ಸರ್ಕಾರ ಬುಧವಾರ ನೇಮಕ ಮಾಡಿದೆ. ಜುಲೈ 5 ರಂದು ಕೊಲಿಜಿಯಂ ಮಾಡಿದ್ದ ಶಿಫಾರಿಸಿನ ಆಧಾರದ ಮೇಲೆ ಕೇಂದ್ರ ಸರ್ಕಾರ ಈ ಇಬ್ಬರ ನೇಮಕವನ್ನು ಅಂತಿಮಗೊಳಿಸಿದೆ.

ಭುಯಾನ್ ಅವರು ಆಂಧ್ರಪ್ರದೇಶದವರು. 2011ರಲ್ಲಿ ಗುವಾಹಟಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. ವೆಂಕಟನಾರಾಯಣ ಭಟ್ಟಿ ಅವರು 2013ರಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. ಈ ಇಬ್ಬರ ನೇಮಕದೊಂದಿಗೆ, ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ‌

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು