News Karnataka Kannada
Friday, May 10 2024
ದೇಶ

“ಜಮ್ಮು ಕಾಶ್ಮೀರ ನ್ಯಾಷನಲ್​ ಫ್ರಂಟ್”​ ಅನ್ನು ನಿಷೇಧಿಸಿದ ಕೇಂದ್ರ ಸರ್ಕಾರ

New Project
Photo Credit : News Kannada

ದೆಹಲಿ: ಪ್ರತ್ಯೇಕತಾವಾದಿ ಚಟುವಟಿಕೆಗಳನ್ನು ಹರಡುತ್ತಿರುವ ಕಾಣಕ್ಕಾಗಿ ಕೇಂದ್ರ ಸರ್ಕಾರವು ಯುಎಪಿಎ ಅಡಿಯಲ್ಲಿ “ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್”​ ಅನ್ನು ನಿಷೇಧಿಸಿದೆ.

ಜೆಕೆಎನ್​ಎಫ್​ ಸದಸ್ಯರು ಕಾಶ್ಮೀರದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುವುದು, ಭದ್ರತಾ ಪಡೆಗಳ ಮೇಲೆ ಆಗಾಗ್ಗೆ ಕಲ್ಲು ತೂರಾಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಹಿಂಸಾತ್ಮಕ ಪ್ರತಿಭಟನಾಕಾರರನ್ನು ಸಂಘಟಿಸುವಲ್ಲಿ ತೊಡಗಿಸಿಕೊಂಡಿದ್ದಾರೆ’ ಹೀಗಾಗಿ ಈ ಸಂಘಟನೆಯನ್ನು ಐದು ವರ್ಷಗಳ ಕಾಲ ನಿಷೇಧಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ಕೇಂದ್ರ ಗೃಹ ಸಚಿವಾಲಯದ ಪ್ರಕಾರ, ಜನರಲ್ಲಿ ಅಸಮಾಧಾನದ ಬೀಜ ಬಿತ್ತುತ್ತಾ, ಭದ್ರತೆ ಹಾಗೂ ಸಾರ್ವಭೌಮತೆಗೆ ಧಕ್ಕೆ ತರುವಂತಹ ಕೆಲಸ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರವು ನ್ಯಾಷನಲ್​ ಫ್ರಂಟ್​ ಮೇಲೆ ಐದು ವರ್ಷಗಳ ನಿಷೇಧ ಹೇರಿದೆ. ಆದೇಶದಲ್ಲಿ, ಗೃಹ ಸಚಿವಾಲಯವು ನಯೀಮ್ ಅಹ್ಮದ್ ಖಾನ್ ನೇತೃತ್ವದ ಜೆಕೆಎನ್​ಎಫ್​ ಅನ್ನು ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆಯಡಿ ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

ದೇಶದ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭಯೋತ್ಪಾದಕ ಶಕ್ತಿಗಳನ್ನು ಬೇರುಸಹಿತ ಕಿತ್ತೊಗೆಯಲು ನಾವು ಬದ್ಧರಾಗಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಮಾಜಿಕ ಮಾಧ್ಯಮ ಫ್ಲ್ಯಾಟ್​ಫಾರ್ಮ್​ ಎಕ್ಸ್​ನಲ್ಲಿ ನಿಷೇಧದ ಬಗ್ಗೆ ಮಾಹಿತಿ ನೀಡಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು