ಛತ್ತೀಸ್ಗಢ : ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 10 ವರ್ಷಗಳ ಹಿಂದೆ ಕಿಡ್ನಿಯಲ್ಲಿ ಕಲ್ಲು ಕಾಣಿಸಿಕೊಂಡು ಚಿಕಿತ್ಸೆಗೆ ತೆರಳಿದ್ದ ಯುವಕನ ಕಿಡ್ನಿಯನ್ನೇ ತೆಗೆದಿರುವ ಸುದ್ದಿ ಇದೀಗ ಬಯಲಾಗಿದೆ.
ಚಿಕಿತ್ಸೆಯ ಹತ್ತು ವರ್ಷಗಳ ನಂತರ, ಯುವಕನಿಗೆ ಇದ್ದಕ್ಕಿದ್ದಂತೆ ಹೊಟ್ಟೆ ನೋವು ಕಾಣಿಸಿಕೊಂಡಿತು. ಆತ ಚಿಕಿತ್ಸೆಗೆಂದು ಆಸ್ಪತ್ರೆಗೆ ತೆರಳಿದ ವೇಳೆ ಸತ್ಯ ಬಯಲಾಗಿದೆ. ತನ್ನ ಒಂದು ಮೂತ್ರಪಿಂಡವನ್ನು ತೆಗೆದುಹಾಕಲಾಗಿದೆ ಎಂದು ತಿಳಿದ ಯುವಕನಿಗೆ ಆಘಾತವಾಗಿದೆ.
ಆರೋಪಿ ವೈದ್ಯರ ವಿರುದ್ಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ವೇಳೆ ಆರೋಪಿ ವೈದ್ಯನ ಪದವಿ ಸುಳ್ಳು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ. ಸಂತೋಷ್ ಗುಪ್ತಾ ಹತ್ತು ವರ್ಷಗಳ ಹಿಂದೆ ಕಿಡ್ನಿಯಲ್ಲಿನ ಕಲ್ಲುಗಳಿಗೆ ಕೊರ್ಬಾದ ರಾಜ್ಗಮರ್ ರಸ್ತೆಯಲ್ಲಿರುವ ಸೃಷ್ಟಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಕಾಲೇಜಿನ ವೈದ್ಯರು ಚಿಕಿತ್ಸೆ ನೀಡಿದ್ದರು.
ಆದರೆ, ವೈದ್ಯರು ಕಿಡ್ನಿ ಸ್ಟೋನ್ ತೆಗೆಯುವ ಬದಲು ಅವರ ಒಂದು ಕಿಡ್ನಿ ತೆಗೆದಿದ್ದಾರೆ. ಇದೀಗ ಸಂತ್ರಸ್ತ ಆರೋಗ್ಯ ಇಲಾಖೆಗೆ ದೂರು ನೀಡಿದ್ದಾರೆ. ತನಿಖೆ ವೇಳೆ ದೂರು ಮಾನ್ಯವಾಗಿದೆ ಎಂದು ತಿಳಿದುಬಂದಿದೆ. ನಂತರ ಪೊಲೀಸರು ನಕಲಿ ವೈದ್ಯರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು. ಈ ನಡುವೆ ರಾಂಪುರ ಚೌಕಿ ಪೊಲೀಸರು ನಕಲಿ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…