News Karnataka Kannada
Wednesday, May 08 2024
ಛತ್ತೀಸಗಢ

ಮೂರು ಕಣ್ಣು ಮತ್ತು ನಾಲ್ಕು ಮೂಗಿನ ರಂಧ್ರ ಹೊಂದಿರುವ ವಿಚಿತ್ರ ಕರುವಿಗೆ ಜನ್ಮ ನೀಡಿರುವ ಹಸು

Raipur
Photo Credit :

ರಾಯ್ಪುರ: ಹಸುವೊಂದು ಮೂರು ಕಣ್ಣು ಮತ್ತು ನಾಲ್ಕು ಮೂಗಿನ ರಂಧ್ರ ಹೊಂದಿರುವ ವಿಚಿತ್ರ ಕರುವಿಗೆ ಜನ್ಮ ನೀಡಿರುವ ಘಟನೆ ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯಲ್ಲಿ ನಡೆದಿದೆ.

ಜನವರಿ 14 ರಂದು ಸಂಜೆ 7 ಗಂಟೆ ಸುಮಾರಿಗೆ ಹಸು ಕರುವಿಗೆ ಜನ್ಮ ನೀಡಿದ್ದು, ಅಂದು ಮಕರ ಸಂಕ್ರಾಂತಿ ಹಬ್ಬದವಾಗಿದ್ದರಿಂದ ಕರುವಿನ ಜನನದ ಮೇಲೆ ಎಲ್ಲರಿಗೂ ನಂಬಿಕೆ ಹೆಚ್ಚಾಗಿದೆ. 3 ಕಣ್ಣಿನ ಕರುವನ್ನು ನೋಡಲು ಜನ ಮುಗಿಬೀಳುತ್ತಿದ್ದು, ಗ್ರಾಮಸ್ಥರು ದೀಪ ಹಚ್ಚಿ, ತೆಂಗಿನಕಾಯಿ ಒಡೆದು ಕರು ಮಹಾದೇವನ ರೂಪ ತಾಳಿದೆ ಎಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ರೈತ ಹೆಮಂತ್ ಚಂದೇಲ್ ಅವರು ಕೃಷಿ ಕೆಲಸದ ಜೊತೆಗೆ ಹಸು ಸಾಕಣೆಯಲ್ಲಿ ತೊಡಗಿಸಿಕೊಂಡಿದ್ದು, ಜರ್ಸಿ ಹಸುವನ್ನು ಸಾಕಿದ್ದಾರೆ. ಸಂಕ್ರಾತಿ ಹಬ್ಬದಂದು ಹಸು ಕರುವಿಗೆ ಜನ್ಮ ನೀಡಿದ್ದು, ಎರಡು ಕಣ್ಣುಗಳ ಮಧ್ಯೆ ಹಸುವಿನ ಹಣೆಯ ಮೇಲೆ ಮತ್ತೊಂದು ಕಣ್ಣಿದೆ. ವಿಶೇಷವೆಂದರೆ ಈ ಹಸು ಎರಡು ಮೂಗಿನ ರಂಧ್ರಗಳ ಬದಲಿಗೆ 4 ರಂಧ್ರಗಳನ್ನು ಹೊಂದಿದೆ ಹಾಗೂ ಅದರ ಬಾಲ ಜಡೆಯ ಮಾದರಿ ಇದೆ ಎಂದು ಹೇಳಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು