News Karnataka Kannada
Sunday, April 28 2024
ಛತ್ತೀಸಗಢ

ರಾಯ್ಪುರ: ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ನಕ್ಸಲರ ಹತ್ಯೆ

Kashmir Encounter 9 7 21
Photo Credit :

ರಾಯ್ಪುರ: ಛತ್ತೀಸ್‌ಗಢದ ಹಲವೆಡೆ ನಕ್ಸಲ್ ಚಟುವಟಿಕೆ ಮುಂದುವರಿದಿದ್ದು, ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾಪಡೆ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಹತರಾಗಿದ್ದಾರೆ. ಮೃತ ನಕ್ಸಲರ ಬಳಿಯಿದ್ದ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸುಕ್ಮಾ ಜಿಲ್ಲೆಯ ಕನೈಗುಡ ಗ್ರಾಮದ ಗೊಂಪಾಡ್ ಬಳಿ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅವಿತಿಟ್ಟುಕೊಂಡಿರುವ ಬಗ್ಗೆ ಭದ್ರತಾ ಪಡೆಗಳಿಗೆ ಖಚಿತ ಮಾಹಿತಿ ಲಭಿಸಿತು. ಸಿಆರ್‌ಪಿಎಫ್, ಡಿಆರ್‌ಐ ಮತ್ತು ಕೋಬ್ರಾ ಜಂಟಿ ಪಡೆಗಳು ಶೋಧ ನಡೆಸುತ್ತಿದ್ದಾಗ ಮಾವೋವಾದಿಗಳ ಗುಂಡು ಹಾರಿಸಿದರು. ಯೋಧರು ಮತ್ತು ನಕ್ಸಲರ ಜೊತೆ ಕೆಲಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಹತರಾದರು. ಎನ್‌ಕೌಂಟರ್ ವೇಳೆ ಇನ್ನೂ ಕೆಲವು ನಕ್ಸಲರು ಗಾಯಗೊಂಡಿರುವ ಸಾಧ್ಯತೆ ಇದ್ದು, ಆ ಪ್ರದೇಶದಲ್ಲಿ ತೀವ್ರ ಶೋಧ ಮುಂದುವರಿದಿದೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು