ರಾಯ್ಪುರ್: ಭದ್ರತಾಪಡೆ ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ದಾಳಿಯಲ್ಲಿ ನಕ್ಸಲ್ ನಾಯಕ ಶಂಕರ್ ರಾವ್ ಸೇರಿದಂತೆ 29 ನಕ್ಸಲರ ಹತ್ಯೆ ಮಾಡಿದ ಘಟನೆ ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಭದ್ರತಾ ಪಡೆಯ ಐಜಿ ಬಸ್ತಾರ್ ಪಿ ಸುಂದರರಾಜ್ ತಿಳಿಸಿದ್ದಾರೆ.
ಈ ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಇದುವರೆಗೆ 29 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಗೀಡಾದ ನಕ್ಸಲ್ ನಾಯಕನ ತಲೆಗೆ 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಇನ್ನೂ ಎನ್ಕೌಂಟರ್ ನಡೆಯುತ್ತಿದೆ. ಸ್ಥಳದಲ್ಲಿ ಹಲವು ಸ್ಫೋಟಕ ವಸ್ತುಗಳು ಸೇರಿದಂತೆ ಎಕೆ 47 ಬಂದೂಕನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಐಕೆ ಎಲೆಸೆಲಾ ತಿಳಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.