ನಕ್ಸಲರು – ಪೊಲೀಸರ ನಡುವೆ ಗುಂಡಿನ ದಾಳಿ: 2 ಮಹಿಳೆಯರು, 7 ನಕ್ಸಲರು ಬಲಿ

ಛತ್ತೀಸ್​​ಗಢ: ಇಬ್ಬರು ಮಹಿಳೆಯರು ಸೇರಿ ಏಳು ನಕ್ಸಲರು ಗುಂಡಿನ ದಾಳಿಗೆ ಬಲಿಯಾಗಿರುವ ಘಟನೆ ಛತ್ತೀಸ್​​ಗಢದಲ್ಲಿ ನಡೆದಿದೆ.

ನಾರಾಯಣಪುರ ಮತ್ತು ಕಂಕೇರ್​ ಜಿಲ್ಲೆಯ ಗಡಿಭಾಗದಲ್ಲಿ ಭದ್ರತಾ ಸಿಬ್ಬಂದಿಗೊಂದಿಗಿನ ಗುಂಡಿನ ದಾಳಿ ನಡೆದಿದೆ. ಪೊಲೀಸರು ಹಂಚಿಕೊಂಡ ಮಾಹಿತಿ ಪ್ರಕಾರ, ಜಿಲ್ಲೆಯ ರಿಸರ್ವ್​ ಗಾರ್ಡ್ ​ ಮತ್ತು ವಿಶೇಷ ಕಾರ್ಯಪಡೆ ಜಂಟಿ ತಂಡ ನಕ್ಸಲರ ಜೊತೆಗೆ ಗುಂಡಿನ ದಾಳಿ ನಡೆಸಿದ್ದಾರೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಅಬುಜ್ಮದ್​ ಪ್ರದೇಶದ ಟೆಕ್ಮೆಟಾ ಮತ್ತು ಕಾಕೂರ್ ಗ್ರಾಮದ ನಡುವಿನ ಕಾಡಿನಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಹೇಳಿದ್ದಾರೆ.

ಇಬ್ಬರು ಮಹಿಳೆಯರು ಸೇರಿ 7 ನಕ್ಸಲರ ಶವವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಎಕೆ 47 ರೈಫಲ್​ ಮತ್ತು ಇತರೆ ಶಸ್ತ್ರಾಸ್ತ್ರ, ಸ್ಫೋಟಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಗುಂಡೇಟಿಗೆ ಬಲಿಯಾದ ನಕ್ಸಲರ ಗುರುತು ಇನ್ನು ಪತ್ತೆಯಾಗಿಲ್ಲವೆಂದು ತಿಳಿದುಬಂದಿದೆ.

 

Chaitra Kulal

Recent Posts

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 min ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

12 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

49 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

1 hour ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 hour ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

2 hours ago