ಸಾರ್ವಜನಿಕ ರ‍್ಯಾಲಿಯಲ್ಲಿ ಕಾಂಗ್ರೆಸ್  ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ

ಮುಂಗೇಲಿ: ಪ್ರಧಾನಿ ನರೇಂದ್ರ ಮೋದಿ  ಸೋಮವಾರ ಕಾಂಗ್ರೆಸ್  ವಿರುದ್ಧ ವಾಗ್ದಾಳಿ ನಡೆಸಿದ್ದು, ಛತ್ತೀಸ್‌ಗಢದಲ್ಲಿ  ಕಾಂಗ್ರೆಸ್ ಸರ್ಕಾರ ನಿರ್ಗಮಿಸಲು ಕ್ಷಣಗಣನೆ ಆರಂಭವಾಗಿದೆ ಎಂದು ಹೇಳಿದ್ದಾರೆ.

ಛತ್ತೀಸ್‌ಗಢದ ಮುಂಗೇಲಿ ಮತ್ತು ಮಹಾಸಮುಂದ್ ಜಿಲ್ಲೆಗಳಲ್ಲಿ  ಎರಡು ಸಾರ್ವಜನಿಕ ರ‍್ಯಾಲಿ ಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ರಾಜ್ಯವನ್ನು ಲೂಟಿ ಮಾಡುವುದೇ ಕಾಂಗ್ರೆಸ್‌ನ ಏಕೈಕ ಗುರಿಯಾಗಿದೆ. ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರ ಮಗ, ಸಂಬಂಧಿಕರು ಮತ್ತು ಅವರ ನಿಕಟ ಅಧಿಕಾರಿಗಳು ಛತ್ತೀಸ್‌ಗಢವನ್ನು ಲೂಟಿ ಮಾಡಿ ನಾಶಪಡಿಸಿದ್ದಾರೆ ಎಂದು ಆರೋಪಿಸಿದರು.

ದೆಹಲಿಯ ಕೆಲವು ಮಹಾಜ್ಞಾನಿ ಕಾಂಗ್ರೆಸ್ ನಾಯಕರು ಛತ್ತೀಸ್‌ಗಢದಲ್ಲಿ ತಮ್ಮ ಸಾರ್ವಜನಿಕ ಸಭೆಗಳಲ್ಲಿ ಮೋದಿ ಒಬಿಸಿಯಿಂದ ಬಂದವರು ಎಂದು ಹೇಳುತ್ತಿದ್ದಾರೆ . ಕಳೆದ ಹಲವಾರು ತಿಂಗಳುಗಳಿಂದ ಕಾಂಗ್ರೆಸ್ ಇಡೀ ಒಬಿಸಿ ಸಮುದಾಯವನ್ನು ಮೋದಿ ಹೆಸರಿನಲ್ಲಿ ನಿಂದಿಸುತ್ತಿದೆ. ‘ಪಂಚಾಯತ್‌ನಿಂದ ಸಂಸತ್ತಿನವರೆಗೆ’ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದಾಗ ಇತರ ಹಿಂದುಳಿದ ವರ್ಗ (ಒಬಿಸಿ) ಸಮುದಾಯಕ್ಕೆ ಮೀಸಲಾತಿಯನ್ನು ಜಾರಿಗೊಳಿಸಲಿಲ್ಲ. ಕಾಂಗ್ರೆಸ್ ಈ ಸಮುದಾಯವನ್ನು ನಿಂದಿಸುತ್ತಿದೆ ಎಂದು ಮೋದಿ ಹೇಳಿದರು.

ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪದ ಕುರಿತು ಸಿಎಂ ಅವರನ್ನು ಗುರಿಯಾಗಿಸಿದ ಪ್ರಧಾನಿ, ಬೆಟ್ಟಿಂಗ್ ಆ್ಯಪ್ ಮೂಲಕ ಸಿಎಂ ಮತ್ತು ದೆಹಲಿ ದರ್ಬಾರ್ (ದೆಹಲಿಯಲ್ಲಿ ಕಾಂಗ್ರೆಸ್ ನಾಯಕತ್ವ) ಎಷ್ಟು ಪಾಲು ಪಡೆದಿದ್ದಾರೆ ಎಂಬುದನ್ನು ಕಾಂಗ್ರೆಸ್‌ನ ‘ಗಣಿತಶಾಸ್ತ್ರಜ್ಞರು’ ಹೇಳಬೇಕು ಎಂದು ಹೇಳಿದರು.

Ashika S

Recent Posts

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

4 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

22 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

37 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

57 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago